Mangaluru : ಸೈಬರ್ ವಂಚನೆಗಾಗಿ ಬಡವರ ಬ್ಯಾಂಕ್ ಖಾತೆ ಬಳಕೆ – ಇಬ್ಬರು ಅರೆಸ್ಟ್

Mangaluru : ಯಾವುದೇ ರೀತಿ ಕಾನೂನುಗಳನ್ನು ಜಾರಿಗೊಳಿಸಿದರು ಕೂಡ ಸೈಬರ್ ವಂಚನೆ ಜಾಲ ದಿನದಿಂದ ದಿನಕ್ಕೆ ದೊಡ್ಡದಾಗುತ್ತದೆ. ಇದಕ್ಕೆ ಕಡಿವಾಣವೇ ಇಲ್ಲ ಎನ್ನುವ ಆತಂಕ ಎದುರಾಗಿದೆ. ಈ ನಡುವೆ ಮಂಗಳೂರಿನಲ್ಲಿ ಒಂದು ಪ್ರಕರಣ ಬೆಳಕಿಗೆ ಬಂದಿದ್ದು ಸೈಬರ್ ವಂಚನೆಗಾಗಿ ಬಡವರ ಬ್ಯಾಂಕ್ ಖಾತೆಯನ್ನು ಬಳಸುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಹೌದು, ದಕ್ಷಿಣ ಕನ್ನಡ ಸೈಬರ್ ಕ್ರೈಂ (Cyber Crime) ಪ್ರಕರಣದ ತನಿಖೆ ವೇಳೆ ಆರೋಪಿಗಳ ಖತರ್ನಾಕ್ ಪ್ಲ್ಯಾನ್ ಬೆಳಕಿಗೆ ಬಂದಿದೆ. ಆಲೈನ್ ವಂಚನೆಗಾಗಿ (Online fraud) ಬಡ ಜನರ ಬ್ಯಾಂಕ್ ಖಾತೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದ ಇಬ್ಬರು ಆರೋಪಿಗಳನ್ನು ದಕ್ಷಿಣ ಕನ್ನಡ (Dakshina Kannada) ಜಿಲ್ಲೆ ಪೊಲೀಸರು ಬಂಧಿಸಿದ್ದಾರೆ.
ಬೆಳಗಾವಿಯ (Belagavi) ತಹಸೀಲ್ದಾರ್ ಗಲ್ಲಿಯ ಅವಿನಾಶ್ ಸುತಾರ್ (28), ರಾಮದೇವ ಗಲ್ಲಿಯ ಅನೂಪ್ ಕಾರೇಕರ್ (42)ಬಂಧಿತ ಆರೋಪಿಗಳು. ಇವರು ಅಮಾಯಕರಿಗೆ ಚಿಲ್ಲರೆ ಹಣ ನೀಡಿ ಬ್ಯಾಂಕ್ ಖಾತೆ ತೆರೆಯಲು ಹೇಳುತ್ತಾರೆ. ಬಳಿಕ, ಆರೋಪಿಗಳು ಆ ಬ್ಯಾಂಕ್ ಖಾತೆಗಳ ಮಾಹಿತಿಯನ್ನು ಪಡೆದುಕೊಂಡು, ಆನ್ ಲೈನ್ ಬ್ಯುಸಿನೆಸ್ ಮಾಡುವುದಾಗಿ ಹೇಳುತ್ತಿದ್ದರು. ಬಳಿಕ ಮುಗ್ದರ ಬ್ಯಾಂಕ್ ಖಾತೆ ಮಾಹಿತಿಯನ್ನು ಸೈಬರ್ ವಂಚಕರ ಕೈಗಿಡುತ್ತಿದ್ದರು. ನಂತರ, ಸೈಬರ್ ವಂಚಕರು ಈ ಬ್ಯಾಂಕ್ ಖಾತೆಗಳನ್ನು ಇಟ್ಟುಕೊಂಡು, ಶ್ರೀಮಂತ ಜನರಿಗೆ ವಿಡಿಯೊ ಕಾಲ್, ಡಿಜಿಟೆಲ್ ಅರೆಸ್ಟ್ ಸೇರಿದಂತೆ ಹಲವು ವಿಧಾನಗಳಲ್ಲಿ ಬ್ಲ್ಯಾಕ್ ಮೇಲ್ ಮಾಡುತ್ತಾರೆ. ಬಳಿಕ, ವಂಚಕರ ಜಾಲಕ್ಕೆ ಸಿಲುಕಿದವರ ಕಡೆಯಿಂದ ಮುಗ್ದ ಜನರ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಮಾಡಿಸುತ್ತಾರೆ.
ಪ್ರಕರಣ ಬೆಳಕಿಗೆ ಬಂದಿದ್ದು ಹೇಗೆ?
ಮಂಗಳೂರಿನ ರಾಧಾಕೃಷ್ಣ ನಾಯಕ್ ಎಂಬುವರಿಗೆ ವಿಡಿಯೋ ಕಾಲ್ ಮಾಡಿ ನಿಮ್ಮನ್ನು ಡಿಜಿಟಲ್ ಅರೆಸ್ಟ್ ಮಾಡಿಸುತ್ತೇವೆ ಎಂದು ಅವರಿಂದ ಬರೋಬ್ಬರಿ 40 ಲಕ್ಷವನ್ನು ಪಡೆದಿದ್ದರು. ಕೊನೆಗೆ ಅನುಮಾನ ಗೊಂಡ ರಾಧಾಕೃಷ್ಣ ಅವರು ಪೊಲೀಸರಿಗೆ ದೂರ ನೀಡಿ ವಿಚಾರಣೆ ನಡೆಸಿದಾಗ ಬೆಳಗಾವಿಯ ಯಾರದು ಅಕೌಂಟ್ಗೆ ಹಣ ವರ್ಗಾವಣೆ ಆಗಿರುವುದು ಕಂಡುಬಂದಿದೆ. ಇದರ ಜಾಡು ಹಿಡಿದ ಪೊಲೀಸರಿಗೆ ಈ ಇಬ್ಬರು ಅತಿಥಿಗಳಾಗಿದ್ದಾರೆ
Comments are closed.