Udupi: ನಾವೇ ರಾಜಿ ಮಾಡಿಕೊಂಡಿದ್ದೇವೆ, ಪ್ರಕರಣ ಹಿಂಪಡೆಯಿರಿ-ಡಿಸಿಗೆ ಮನವಿ

Udupi: ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡಿದ ಘಟನೆಗೆ ಸಂಬಂಧಪಟ್ಟಂತೆ ಪ್ರಕರಣಗಳನ್ನು ಹಿಂಪಡೆಯುವಂತೆ ಆಗ್ರಹ ಮಾಡಿ ಸಂತ್ರಸ್ತೆ ಲಕ್ಕವ್ವ ಬಾಯಿ ನೇತೃತ್ವದಲ್ಲಿ ಸಮುದಾಯದವರು ಜಿಲ್ಲಾಧಿಕಾರಿ ಕೆ.ವಿದ್ಯಾಕುಮಾರಿ ಸೋಮವಾರ (ಮಾ.24, ಇಂದು) ಮನವಿಯನ್ನು ಸಲ್ಲಿಸಿದರು.

ಆಕಸ್ಮಿಕವಾಗಿ ನಡೆದ ಘಟನೆಯ ಅನಂತರ ನಮ್ಮ ಸಮುದಾಯದ ಪ್ರಮುಖರು ಪದಾಧಿಕಾರಿಗಳ ನೇತೃತ್ವದಲ್ಲಿ ಈ ಸಮ್ಯೆಯನ್ನು ಮಲ್ಪೆ ಪೊಲೀಸ್‌ ಠಾಣೆಯಲ್ಲಿ ಸೌಹಾರ್ದಯುತವಾಗಿ ಇತ್ಯರ್ಥ ಮಾಡಲಾಗಿದೆ. ಮುಗ್ಧ ಮೀನುಗಾರರ ಮೇಲೆ ಕೂಸುಗಳನ್ನು ಹಾಕಿ ಬಂಧನ ಮಾಡಿರುವುದು ಸರಿಯಲ್ಲ. ಹೀಗಾಗಿ ಅವರ ಮೇಲಿನ ಪ್ರಕರಣಗಳನ್ನು ಹಿಂಪಡೆದು ನಾವೆಲ್ಲ ಸೌಹಾರ್ದಯುತ ರೀತಿಯಲ್ಲಿ ಕೆಲಸ ಮಾಡಿ ಉತ್ತಮ ಜೀವನ ನಡೆಸಲು ಅವಕಾಶ ನೀಡುವಂತೆ ಮನವಿಯಲ್ಲಿ ತಿಳಿಸಿದ್ದಾರೆ.

Comments are closed.