Vitla: ಒಡೆದ ಟೈಯರ್‌ನಲ್ಲೇ ಬಸ್‌ ಸಂಚಾರ; ತಡೆದು ಪೊಲೀಸರಿಗೊಪ್ಪಿಸಿದ ಸಾರ್ವಜನಿಕರು!

Share the Article

Vitla: ವಿಟ್ಲ-ಮುಡಿಪು ಮಧ್ಯೆ ಅಪಾಯಕಾರಿ ರೀತಿಯಲ್ಲಿ ಸಂಚಾರ ಮಾಡುತ್ತಿದ್ದ ಖಾಸಗಿ ಬಸ್ಸನ್ನು ಸಾರ್ವಜನಿಕರು ತಡೆದು ವಿಟ್ಲ ಪೊಲೀಸರಿಗೆ ಒಪ್ಪಿಸಿರುವ ಘಟನೆ ನಡೆದಿದೆ.

ವಿಟ್ಲ-ಮುಡಿಪು-ಮಂಗಳೂರು ಮಧ್ಯೆ ಸಂಚಾರ ಮಾಡುವ SARA ಹೆಸರಿನ ಖಾಸಗಿ ಬಸ್ಸಿನಲ್ಲಿ ಹಿಂದಿನ ಎಡಬದಿಯಲ್ಲಿ ಒಂದೇ ಟಯರ್‌ನಲ್ಲಿ ಸಂಚರಿಸುತ್ತಿತ್ತು. ಇನ್ನೊಂದು ಟಯರ್‌ ಒಡೆದು ಕರ್ಕಶ ಶಬ್ದ ಬರುತ್ತಿದ್ದರೂ ಚಾಲಕ, ಕಂಡಕ್ಟರ್‌ ಅದನ್ನು ಸರಿ ಮಾಡುವ ಕೆಲಸಕ್ಕೆ ತಲೆ ಹಾಕಿಲ್ಲ.

ಶನಿವಾರ ಮಧ್ಯಾಹ್ನದಿಂದ ಭಾನುವಾರ ಮಧ್ಯಾಹ್ನ ತನಕ ವಿಟ್ಲ ಮುಡಿಪು ಮಂಗಳೂರು ಮಧ್ಯೆ ಅಪಾಯಕಾರಿ ರೀತಿಯಲ್ಲಿ ಸಂಚಾರ ಮಾಡುತ್ತಾ ಬಸ್‌ ಸಿಬ್ಬಂದಿಗಳು ಪ್ರಯಾಣಿಕರ ಪ್ರಾಣದ ಜೊತೆ ಚೆಲ್ಲಾಟ ಆಡುತ್ತಿದ್ದಾರೆ ಎಂದು ಆರೋಪ ಮಾಡಲಾಗಿದೆ. ಈ ಕುರಿತು ಮಾಹಿತಿ ಪಡೆದ ಸಾರ್ವಜನಿಕರು ಸಾಲೆತ್ತೂರು ಪೇಟೆಯಲ್ಲಿ ಬಸ್ಸನ್ನು ತಡೆಹಿಡಿದು ವಿಟ್ಲ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.

ಬಂಟ್ವಾಳ ಸಾರಿಗೆ ಅಧಿಕಾರಿಗಳಿಗೂ ಮಾಹಿತಿ ನೀಡಿದ್ದಾರೆ.

Comments are closed.