D K Shivkumar : ರಾಜ್ಯದ ಜನತೆಗೆ ಸಿಹಿ ಸುದ್ದಿ – ಮನೆ ಬಾಗಿಲಿಗೆ ‘ಖಾತೆ ವಿತರಣೆ’

D K Shivkumar : ರಾಜ್ಯದ ಜನತೆಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸಿಹಿ ಸುದ್ದಿ ನೀಡಿದ್ದು ಇನ್ನು ಮುಂದೆ ಮನೆ ಬಾಗಿಲಿಗೆ ‘ಖಾತೆ ವಿತರಣೆ’ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಹೌದು, 2025- 26 ನೇ ಸಾಲಿನ ಬಿಬಿಎಂಪಿ ಬಜೆಟ್ ಕುರಿತು ಬೆಂಗಳೂರು ನಗರದ ಶಾಸಕರ ಜತೆ ಸಭೆ ಬಳಿಕ ಡಿಸಿಎಂ ಡಿ.ಕೆ. ಶಿವಕುಮಾರ್ ಮಾತನಾಡಿ ‘ಮನೆ ಬಾಗಿಲಿಗೆ ತೆರಳಿ ಉಚಿತವಾಗಿ ಖಾತೆ ನೀಡುವ ವಿನೂತನ ವ್ಯವಸ್ಥೆಯನ್ನು ಇಡೀ ದೇಶದಲ್ಲಿಯೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಜಾರಿಗೆ ತರಲಾಗಿದೆ. ಈ ಕಾರ್ಯಕ್ರಮಕ್ಕೆ ಏಪ್ರಿಲ್ ತಿಂಗಳಿನಿಂದ ಚಾಲನೆ ದೊರೆಯಲಿದೆ. ಪ್ರತಿಯೊಂದು ಆಸ್ತಿ ದಾಖಲೆಗಳನ್ನು ಡಿಜಿಟಲೀಕರಣ ಮಾಡಲಾಗಿದೆ. ಅಕಸ್ಮಾತ್ ತಪ್ಪಿಹೋಗಿದ್ದಲ್ಲಿ ಅಂತವರು ತಮ್ಮ ದಾಖಲೆಗಳನ್ನು ಮತ್ತೆ ನೀಡಬಹುದು. ಬೆಂಗಳೂರು ನಗರದ ಪ್ರತಿ ಕ್ಷೇತ್ರದ ಶಾಸಕರ ಬಳಿ ಮಾತನಾಡಿ, ಕ್ಷೇತ್ರವಾರು ಕಾರ್ಯಕ್ರಮ ನಡೆಸಿ ಈ ಬಗ್ಗೆ ಅರಿವು ಮೂಡಿಸಲಾಗುವುದು” ಎಂದರು.

ಇಷ್ಟೇ ಅಲ್ಲದೆ ಬೀದಿಬದಿ ವ್ಯಾಪಾರಿಗಳಿಗೆ ತಳ್ಳುವ ಗಾಡಿ ವಿತರಣೆ, ಅಕ್ರಮ ನಿರ್ಮಾಣಗಳ ಪತ್ತೆಗೆ ‘ಎಐʼ ತಂತ್ರಜ್ಞಾನದ ಬಳಕೆ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

Comments are closed.