Dharmasthala: ಇನ್ನು ಮುಂದೆ ಧರ್ಮಸ್ಥಳ ಕುರಿತು ವರದಿ ಮಾಡಂಗಿಲ್ಲ: ಜಾರಿಯಾಗಿದೆ ಜಾನ್ ಡೋ ಆದೇಶ

Dharmastala: ಬೆಂಗಳೂರು ನಗರ ಸಿವಿಲ್ ನ್ಯಾಯಾಲಯದಿಂದ(Civil court) ಧರ್ಮಸ್ಥಳ ಕ್ಷೇತ್ರದ ವಿರುದ್ಧ ಅವಹೇಳನ ಮತ್ತು ಅಪಪ್ರಚಾರ ಮಾಡುವವರ ವಿರುದ್ಧ ಜಾನ್ ಡೋ(John Do) ಆದೇಶ ಹೊರಡಿಸಲಾಗಿದೆ.

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯವು 2145/2025 ಪ್ರಕರಣದಲ್ಲಿ ಜಾನ್ ಡೋ ಆದೇಶ ನೀಡಿದೆ. ಈ ಆದೇಶದಂತೆ, ಯಾರೇ ಆಗಿದ್ದರೂ ಶ್ರೀ ಕ್ಷೇತ್ರ ಧರ್ಮಸ್ಥಳ, ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ(Dr. D Veerendra Hegde), ಅವರ ಕುಟುಂಬದ ಸದಸ್ಯರು ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಸಂಬಂಧಿತ ಸಂಸ್ಥೆಗಳ ವಿರುದ್ಧ ಅವಹೇಳನಕಾರಿ ಮತ್ತು ಅಪಪ್ರಚಾರ ಮಾಡುವ ಮಾಹಿತಿಯನ್ನು ಪ್ರಕಟಿಸಲು ಅಥವಾ ಹರಡಲು ಆಗುವುದಿಲ್ಲ.

ಜಾನ್ ಡೋ ಆದೇಶ ಎಂದರೆ ಅಜ್ಞಾತ ಅಥವಾ ಪತ್ತೆಯಾಗದ ವ್ಯಕ್ತಿಗಳ ವಿರುದ್ಧವೂ ಜಾರಿಯಾಗುವ ಕಾನೂನು ಕ್ರಮವಾಗಿದೆ.ಇತ್ತೀಚಿನ ದಿನಗಳಲ್ಲಿ ಸೋಶಿಯಲ್ ಮೀಡಿಯಾ ಮತ್ತು ಇತರ ಆನ್‌ಲೈನ್ ತಾಣಗಳಲ್ಲಿ ಅವಹೇಳನಕಾರಿ ಮತ್ತು ಅಪಪ್ರಚಾರ ಹೆಚ್ಚಿರುವ ಕಾರಣ, ಇದನ್ನು ತಡೆಯಲು ಈ ಆದೇಶ ಬಹಳ ಪ್ರಮುಖವಾಗಿದೆ.

ನ್ಯಾಯಾಲಯದ ಆದೇಶ ಉಲ್ಲಂಘನೆ ಮಾಡಿದರೆ, ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಈ ಆದೇಶದ ಪ್ರಕಾರ,ಸಾಮಾಜಿಕ ಜಾಲತಾಣಗಳು ಮತ್ತು ಮಾಧ್ಯಮ ಸಂಸ್ಥೆಗಳು ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಯಾವುದೇ ಅವಹೇಳನಕಾರಿ ವಿಚಾರ ಹಂಚಿಕೊಂಡಲ್ಲಿ ತಕ್ಷಣ ಕಠಿಣ ಕ್ರಮ ಜರುಗಿಸಲಾಗುತ್ತದೆ.

Comments are closed.