Vehicle Rules : ಏಪ್ರಿಲ್ 1ರಿಂದ ಈ ವಾಹನಗಳಿಗೆ ಸಿಗಲ್ಲ ಪೆಟ್ರೋಲ್, ಡೀಸೆಲ್ – ಹೊಸ ರೂಲ್ಸ್ ಜಾರಿ

Vehicle Rules : ವಾಯು ಮಾಲಿನ್ಯವನ್ನು ತಡೆಗಟ್ಟುವ ನೆಟ್ಟಿನಲ್ಲಿ ದೆಹಲಿ ಸರ್ಕಾರ ಹೊಸ ನಿಯಮ ಒಂದನ್ನು ಜಾರಿಗೊಳಿಸಿದೆ. ಈ ನಿಯಮದ ಪ್ರಕಾರ ನಿಮ್ಮ ವಾಹನಗಳು 15 ವರ್ಷಕ್ಕೂ ಹಳೆಯದಾಗಿದ್ದರೆ ಅವುಗಳನ್ನು ರಸ್ತೆಗೆ ಇಳಿಸುವಂತಿಲ್ಲ. ಅಷ್ಟೇ ಅಲ್ಲದೆ ಅವುಗಳಿಗೆ ಪೆಟ್ರೋಲ್ ಡೀಸೆಲ್ ಕೂಡ ಸಿಗುವುದಿಲ್ಲ.
ಹೌದು, ನಿಮ್ಮ ವಾಹನವು 15 ವರ್ಷಗಳ ಮಾರ್ಕ್ ದಾಟಿದ್ರೆ, ರಸ್ತೆಗೆ ಇಳಿಸುವಂತಿಲ್ಲ. ಒಂದು ವೇಳೆ ರಸ್ತೆಗೆ ಇಳಿಸಿದರೂ ಯಾವುದೇ ಪೆಟ್ರೋಲ್ ಬಂಕ್ಗಳಲ್ಲಿ ಡೀಸೆಲ್ ಅಥವಾ ಪೆಟ್ರೋಲ್ ತುಂಬಿಸುವುದಿಲ್ಲ.
ಈ ಹೊಸ ಇಂಧನದ ನಿಯಮದ ಪ್ರಕಾರ, ಹಳೆಯ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ನೀಡುವುದಿಲ್ಲ. ದೆಹಲಿಯಲ್ಲಿ ಹಳೆಯ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳಿಗೆ ಇಂಧನ ನಿಷೇಧ ಮಾಡಲಾಗಿದೆ. ಏಪ್ರಿಲ್ 1 ರಿಂದ ಈ ನಿಯಮ ಜಾರಿಗೊಳ್ಳಲಿದೆ. ಪೆಟ್ರೋಲ್ ಪಂಪ್‌ಗಳಲ್ಲಿ ಹಳೆಯ ವಾಹನಗಳ ಮೇಲ್ವಿಚಾರಣೆ ಮಾಡಲಾಗುತ್ತದೆ. NGT ಸೂಚನೆಗಳ ಪ್ರಕಾರ, ಹಳೆಯ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಸಿಗುವುದಿಲ್ಲ. ಮಾಲೀಕರು ಈ ಬಗ್ಗೆ ಅಲರ್ಟ್ ಆಗಿರಬೇಕು.
Comments are closed.