Bantwala: ಎಸ್‌ಎಸ್‌ಎಲ್‌ಸಿ ಬಾಲಕಿಗೆ ಲೈಂಗಿಕ ಕಿರುಕುಳ; ರಾಜಕೀಯ ಮುಖಂಡನ ಮೇಲೆ ಪೋಕ್ಸೋ ಕೇಸು ದಾಖಲು!

Bantwala: ಎಸ್‌ಎಸ್‌ಎಲ್‌ಸಿ ಕಲಿಯುತ್ತಿದ್ದ ಅಪ್ರಾಪ್ತ ದಲಿತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ತಡವಾಗಿ ಬೆಳಕಿಗೆ ಬಂದಿರುವ ಘಟನೆ ನಡೆದಿದೆ. ವಿಟ್ಲ ಠಾಣೆಯಲ್ಲಿ ದಲಿತ ದೌರ್ಜನ್ಯ ಹಾಗೂ ಪೋಕ್ಸೋ ಪ್ರಕರಣ ದಾಖಲಾಗಿರುವ ಕುರಿತು ವರದಿಯಾಗಿದೆ.

ಆರೋಪಿ ತಲೆ ಮರೆಸಿಕೊಂಡಿದ್ದಾನೆ ಎನ್ನಲಾಗಿದೆ.

ಆರೋಪಿಗೆ ಸೇರಿದ ತೋಟದಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದ ಬಾಲಕಿಯ ಪೋಷಕರು, ಬಾಲಕಿಯ ಮೇಲೆ ಜನವರಿ ತಿಂಗಳಲ್ಲಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ. ಬಾಲಕಿ ಎರಡು ತಿಂಗಳಿನಿಂದ ಶಾಲೆಗೆ ಹೋಗಿರಲಿಲ್ಲ. ಶಾಲೆಯ ಶಿಕ್ಷಕರು ಈ ಕುರಿತು ವಿಚಾರಿಸಿದ್ದು ಆರೋಗ್ಯ ಸರಿಯಿಲ್ಲ ಎಂದು ಹೇಳಿ ಬಾಲಕಿಯನ್ನು ನೋಡಲು ಬಿಡದೆ ಶಿಕ್ಷಕರನ್ನು ಕಳುಹಿಸಿದ್ದರು ಎನ್ನುವ ಕುರಿತು ಮಾತು ಕೇಳಿ ಬಂದಿದೆ.

ಆಸ್ಪತ್ರೆಗೆ ಬಾಲಕಿಯನ್ನು ಕರೆದುಕೊಂಡ ಹೋದಾಗ ಈ ಘಟನೆ ಬೆಳಕಿಗೆ ಬಂದಿದೆ ಎನ್ನಲಾಗಿದ್ದು, ಅಪ್ರಾಪ್ತ ಬಾಲಕಿಯಾಗಿರುವುದರಿಂದ ಪೊಲೀಸ್‌ ಠಾಣೆಗೆ ತಿಳಿದು ಪೋಕ್ಸೋ ಕೇಸು ದಾಖಲು ಮಾಡಿದ್ದಾರೆ. ಈ ವಿಷಯ ಇದೀಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಗಮನಕ್ಕೂ ಬಂದಿದೆ ಎನ್ನಲಾಗಿದೆ.

 

Comments are closed.