of your HTML document.

New Delhi: ಬಿಜೆಪಿಯಿಂದ ಬಸನಗೌಡ ಪಾಟೀಲ್‌ ಯತ್ನಾಳ್‌ ಉಚ್ಛಾಟನೆ!

New Delhi: ಬಿಜೆಪಿಯಿಂದ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರನ್ನು ಉಚ್ಛಾಟನೆ ಮಾಡಲಾಗಿದೆ. ಬಿಜೆಪಿ ಹೈಕಮಾಂಡ್‌ ಈ ನಿರ್ಧಾರ ಕೈಗೊಂಡಿದೆ. ಆರು ವರ್ಷಗಳ ಕಾಲ ಉಚ್ಛಾಟನೆ ಮಾಡಲಾಗಿದೆ.

ಶಿಸ್ತು ಸಮಿತಿ ನೀಡಿದ್ದ ಶೋಕಾಸ್‌ ನೋಟಿಸ್‌ಗೆ ಉತ್ತರ ನೀಡದ ಕಾರಣ ಇವರಿಗೆ ಉಚ್ಛಾಟನೆ ಮಾಡಲಾಗಿದೆ.

ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ವಿರುದ್ಧ ನಾಲಿಗೆ ಹರಿಬಿಟ್ಟು ಅವಹೇಳನಕಾರಿಯಾಗಿ ಮಾತನಾಡಿದ್ದರು. ಪಕ್ಷದ ಶಿಸ್ತು ಉಲ್ಲಂಘನೆ ಮಾಡಿದ್ದರು. ಇದಕ್ಕೆ ಬಿಜೆಪಿ ಹೈಕಮಾಂಡ್‌ ಶೋಕಾಸ್‌ ನೋಟಿಸ್‌ ನೀಡಿತ್ತು. ಇದೀಗ ದೆಹಲಿ ಬಿಜೆಪಿ ಹೈಕಮಾಂಡ್‌ಗೆ ಉತ್ತರ ಸಿಗದ ಕಾರಣ ಬಸನಗೌಡ ಪಾಟೀಲರನ್ನು ಉಚ್ಛಾಟನೆ ಮಾಡಿದೆ.

ಇವರ ಶಾಸಕ ಸ್ಥಾನಕ್ಕೂ ಕುತ್ತು ಬರುತ್ತಾ ಎನ್ನುವ ಪ್ರಶ್ನೆ ಕೂಡಾ ಇದೆ. ಪಕ್ಷದ ಚಿಹ್ನೆಯಡಿ ಗೆದ್ದಿರುವುದು ತನಗೆ ಬೇಡ ಎಂದು ಯತ್ನಾಳ್‌ ರಾಜೀನಾಮೆ ಕೊಟ್ಟರೆ, ಶಾಸಕ ಸ್ಥಾನ ರದ್ದಾಗಬಹುದು, ಪುನಃ ಚುನಾವಣೆಗೆ ಆಗಬಹುದು.

ನೋಟಿಸ್‌ನಲ್ಲೇನಿದೆ?
ಫೆಬ್ರವರಿ 10, 2025 ರಂದು ನೀಡಲಾದ ಶೋಕಾಸ್ ನೋಟಿಸ್‌ಗೆ ನಿಮ್ಮ ಪ್ರತಿಕ್ರಿಯೆಯನ್ನು ಪಕ್ಷದ ಕೇಂದ್ರ ಶಿಸ್ತು ಸಮಿತಿಯು ಪರಿಗಣಿಸಿದೆ ಮತ್ತು ಹಿಂದಿನ ಶೋಕಾಸ್ ನೋಟಿಸ್‌ಗಳಿಗೆ ಪ್ರತಿಕ್ರಿಯೆಯಾಗಿ ಉತ್ತಮ ನಡವಳಿಕೆ ಮತ್ತು ನಡವಳಿಕೆಯ ಭರವಸೆಗಳನ್ನು ನೀಡಿದ್ದರೂ ಸಹ, ನೀವು ಪಕ್ಷದ ಶಿಸ್ತಿನ ಪುನರಾವರ್ತಿತ ಉಲ್ಲಂಘನೆಯನ್ನು ಗಂಭೀರವಾಗಿ ಪರಿಗಣಿಸಿದೆ.

ಆದ್ದರಿಂದ ನಿಮ್ಮನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ತಕ್ಷಣದಿಂದ ಜಾರಿಗೆ ಬರುವಂತೆ 6 [ಆರು] ವರ್ಷಗಳ ಅವಧಿಗೆ ಉಚ್ಚಾಟಿಸಲು ನಿರ್ಧರಿಸಲಾಗಿದೆ ಮತ್ತು ನೀವು ಇಲ್ಲಿಯವರೆಗೆ ಹೊಂದಿದ್ದ ಯಾವುದೇ ಪಕ್ಷದ ಹುದ್ದೆಯಿಂದ ನಿಮ್ಮನ್ನು ತೆಗೆದುಹಾಕಲಾಗುತ್ತದೆ.

Comments are closed.