of your HTML document.

Basanagouda Patil Yatnal: ‘ಸತ್ಯವಂತರಿಗಿದು ಕಾಲವಲ್ಲ…ಪುರಂದರದಾಸರ ಕೀರ್ತನೆ ಬರೆದು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ ಯತ್ನಾಳ್‌!

Basanagouda Patil Yatnal: ಬಿಜೆಪಿಯ ಕೇಂದ್ರ ಶಿಸ್ತು ಸಮಿತಿ ನೀಡಿದ್ದ ಶೋಕಾಸ್‌ ನೋಟಿಸ್‌ಗೆ ಯಾವುದೇ ಉತ್ತರ ನೀಡದ ಕಾರಣ ಬಿಜೆಪಿ ಹೈಕಮಾಂಡ್‌ ಯತ್ನಾಳ್‌ ಅವರನ್ನು ಆರು ವರ್ಷಗಳ ಕಾಲ ಉಚ್ಛಾಟನೆ ಮಾಡಿರುವ ಬೆನ್ನಲ್ಲೇ ಯತ್ನಾಳ್‌ ಅವರು ಪ್ರತಿಕ್ರಿಯೆ ನೀಡಿದ್ದಾರೆ.

‘ವಂಶಪಾರಂಪರ್ಯ ರಾಜಕೀಯ, ಭ್ರಷ್ಟಾಚಾರ, ಪಕ್ಷದೊಳಗಿನ ಸುಧಾರಣೆಗಳ ವಿರುದ್ಧ ಮಾತನಾಡಿದ್ದಕ್ಕಾಗಿ, ಏಕವ್ಯಕ್ತಿ ದಬ್ಬಾಳಿಕೆಯನ್ನು ತೆಗೆದುಹಾಕಿ ಮತ್ತು ಉತ್ತರ ಕರ್ನಾಟಕವನ್ನು ಅಭಿವೃದ್ಧಿಪಡಿಸಲು ವಿನಂತಿಸಿದ್ದಕ್ಕಾಗಿ ಪಕ್ಷವು ನನ್ನನ್ನು 6 ವರ್ಷಗಳ ಕಾಲ ಪಕ್ಷದಿಂದ ಹೊರಹಾಕಿದೆ.’ಇದ್ದಿದ್ದು ಇದ್ದ ಹಾಗೆ ನಾನು ಹೇಳೀರುವ ವಿಚಾರಕ್ಕೆ’ ಪಕ್ಷವು ನನಗೆ ಪ್ರತಿಫಲ ನೀಡಿದೆ.

ಸತ್ಯವಂತರಿಗಿದು ಕಾಲವಲ್ಲ
ದುಷ್ಟಜನರಿಗೆ ಸುಭಿಕ್ಷಕಾಲ ||

ಉಪಕಾರ ಮಾಡಿದರೆ ಅಪಕರಿಸುವ ಕಾಲ

ಸಕಲವು ತಿಳಿದವಗೆ ದುರ್ಭಿಕ್ಷ ಕಾಲ. ಧರ್ಮ ಮಾಡುವಗೆ ನಿರ್ಮೂಲವಾಗುವ ಕಾಲ
ಕರ್ಮಿ ಪಾತಕರಿಗೆ ಬಹು ಸೌಖ್ಯಕಾಲ

ಸತ್ಯವಂತರಿಗಿದು ಕಾಲವಲ್ಲ

ಎಂದು ಬರೆದಿದ್ದಾರೆ.

 

Comments are closed.