Uppinangadi : ಬಿಜೆಪಿ ಮುಖಂಡ ಕೆ ವಿ ಪ್ರಸಾದ್ ಪಕ್ಷದಿಂದ ವಜಾ !!

Uppinangadi: ರಾಜ್ಯದಲ್ಲಿ ಬಿಜೆಪಿಯ ಉಚ್ಚಾಟನೆ ಪರ್ವ ಜೋರಾಗಿ ನಡೆಯುತ್ತಿದೆ. ಈಗ ತಾನೇ ರಾಜ್ಯದ ಪ್ರಮುಖ ಬಿಜೆಪಿ ನಾಯಕ ಯತ್ನಾಳ್ ಅವರನ್ನು ಪಕ್ಷವು ಆರು ವರ್ಷ ಉಚ್ಚಾಟನೆ ಮಾಡಿ ಆದೇಶ ಹೊರಡಿಸಿದೆ. ಇದರ ಎಡೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯಲ್ಲಿ ಬಿಜೆಪಿ ಮುಖಂಡ ಮುಖಂಡ ಕೆ.ವಿ. ಪ್ರಸಾದ್ ಅವರನ್ನು ಪಕ್ಷದಿಂದ ವಜಾ ಮಾಡಲಾಗಿದೆ.
ಹೌದು, ಉಪ್ಪಿನಂಗಡಿಯ(Uppinangadi) ಸಹಕಾರಿ ವ್ಯವಸಾಯಿಕ ಸಂಘದ ನಿಕಟಪೂರ್ವ ಅಧ್ಯಕ್ಷ, ಬಿಜೆಪಿ ಮುಖಂಡ ಕೆ.ವಿ. ಪ್ರಸಾದ್ ಅವರನ್ನು ಪಕ್ಷ ವಿರೋಧಿ ಚಟುವಟಿಕೆಯ ಕಾರಣಕ್ಕೆ ಮುಂದಿನ ಆರು ವರ್ಷಗಳ ಕಾಲ ಪಕ್ಷದಿಂದ ವಜಾಗೊಳಿಸಲಾಗಿದೆ ಎಂದು ಬೆಳ್ತಂಗಡಿ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಎಂ. ಪ್ರಶಾಂತ್ ಪಾರೆಂಕಿ ಆದೇಶ ಪತ್ರದಲ್ಲಿ ತಿಳಿಸಿದ್ದಾರೆ.
ಇಳಂತಿಲ ಗ್ರಾಮ ಪಂಚಾಯಿತಿ ಅಧ್ಯಕ್ಷ ತಿಮ್ಮಪ್ಪ ಗೌಡರ ವಿರುದ್ಧ ಕಾಂಗ್ರೆಸ್ ಮತ್ತು ಎಸ್‌ಡಿಪಿಐ ಸದಸ್ಯರ ಸಹಯೋಗದಲ್ಲಿ ಬಿಜೆಪಿ ಬೆಂಬಲಿತ ಸದಸ್ಯರು ಅವಿಶ್ವಾಸ ನಿರ್ಣಯ ಮಂಡಿಸಿ ಅಧ್ಯಕ್ಷರನ್ನು ಪದಚ್ಯುತಿಗೊಳಿಸಿದ ಘಟನೆ ಹಿಂದೆ ಕೆ.ವಿ. ಪ್ರಸಾದ್ ಪಾತ್ರವಿದೆ ಎನ್ನುವುದು ಪರಿವಾರ ಸಂಘಟನೆಯ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಕಾರಣಕ್ಕಾಗಿಯೇ ಅವರನ್ನು ಪಕ್ಷದಿಂದ ವಜಾಗೊಳಿಸಲಾಗಿದೆ ಎಂಬ ವಿಶ್ಲೇಷಣೆಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿವೆ.
ಆದೇಶದಲ್ಲಿ ಏನಿದೆ?
‘ಕೆ.ವಿ. ಪ್ರಸಾದ್ ಅವರು, ಈ ಬಾರಿಯ ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ ಅಭ್ಯರ್ಥಿಗಳ ವಿರುದ್ಧ ಸ್ಪರ್ಧಿಸಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆ’ ಎಂದು ಆದೇಶದಲ್ಲಿ ಹೇಳಲಾಗಿದೆ.
Comments are closed.