SSLC Exam: ವೈರಲ್ ಆಗ್ತಿದೆ SSLC ಪರೀಕ್ಷೆಯ ನಕಲಿ ಪ್ರಶ್ನೆ ಪತ್ರಿಕೆ!

Share the Article

SSLC Exam: ಎಸ್ಎಸ್ಎಲ್​ಸಿ ಮಕ್ಕಳ ಭವಿಷ್ಯದ ಜೊತೆ ಚೆಲ್ಲಾಟವಾಡಲು ಕೆಲ ಕಿಡಗೇಡಿಗಳು ನಕಲಿ ಪ್ರಶ್ನೆಪತ್ರಿಕೆಯನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹರಿಯಬಿಟ್ಟು ವಂಚನೆ ಎಸಗುತ್ತಿದ್ದಾರೆ.

ಕಿಡಿಗೇಡಿಗಳು ಹಳೆಯ ಪ್ರಶ್ನೆ ಪತ್ರಿಕೆ ಎಡಿಟ್ ಮಾಡಿ, ‘‘ಇದು ಈ ವರ್ಷದ ಪ್ರಶ್ನೆ ಪತ್ರಿಕೆ, ದುಡ್ಡು ಕೊಟ್ಟರೆ ಪ್ರಶ್ನೆ ಪತ್ರಿಕೆ ಸಿಗುತ್ತದೆ’’ ಎಂದು ವೈರಲ್ ಮಾಡುತ್ತಿದ್ದಾರೆ. ಇದರಿಂದ ಮೋಸ ಹೋಗುತ್ತಿರುವ ವಿದ್ಯಾರ್ಥಿಗಳು, ಫೇಕ್ ಪ್ರಶ್ನೆಪತ್ರಿಕೆಗಳನ್ನು ನಂಬಿ ಓದಿಕೊಂಡು ಹೋಗಿ ಮೋಸ ಹೋಗುತ್ತಿದ್ದಾರೆ ಎಂದು ಪೋಷಕರ ಸಮನ್ವಯ ಸಮಿತಿ ಅಧ್ಯಕ್ಷ ಯೋಗಾನಂದ್ ಹೇಳಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಕೆಲ ಕಿಡಿಗೇಡಿಗಳು ಮಕ್ಕಳ ದಿಕ್ಕು ತಪ್ಪಿಸುವ ಪ್ರಯತ್ನ ಮಾಡುತ್ತಿದ್ದು, ಫೇಕ್ ಪ್ರಶ್ನೆ ಪತ್ರಿಕೆಯನ್ನು ಹರಿಬಿಡುತ್ತಿದ್ದಾರೆ. ಇದರಿಂದ ಕೆಲ ಮಕ್ಕಳು ಗೊಂದಲಕ್ಕೊಳಗಾಗಿದ್ದಾರೆ. ಈ ಬಗ್ಗೆ ಸರ್ಕಾರ ಹಾಗೂ ಶಿಕ್ಷಣ ಇಲಾಖೆ ಇನ್ನಾದರೂ ಕಿಡಗೇಡಿಗಳ ವಿರುದ್ದ ಕಠಿಣ ಕ್ರಮಕ್ಕೆ ಮುಂದಾಗಬೇಕಿದೆ.

Comments are closed.