of your HTML document.

Greater Bengaluru: ಗ್ರೇಟರ್‌ ಬೆಂಗಳೂರು ಆಡಳಿತ ಮಸೂದೆ; ರಾಜ್ಯಪಾಲರಿಂದ ವಾಪಸ್!

Greater Bengaluru: ವಿಧಾನಮಂಡಲದ ಉಭಯ ಸದನಗಳ ಅಂಗೀಕಾರದ ಬಳಿಕ ಒಪ್ಪಿಗೆಗೆಂದು ಕಳುಹಿಸಿದ್ದ ಗ್ರೇಟರ್‌ ಬೆಂಗಳೂರು ಆಡಳಿತ ಮಸೂದೆಯನ್ನು ರಾಜ್ಯಪಾಲ ಥಾವರಚಂದ್‌ ಗೆಹಲೋತ್‌ ಅವರು ಸ್ಪಷ್ಟನೆ ಕೇಳಿದ್ದಾರೆ. ಈ ಮೂಲಕ ರಾಜ್ಯ ಸರಕಾರಕ್ಕೆ ವಾಪಸು ಕಳುಹಿಸಿರುವ ಕುರಿತು ವರದಿಯಾಗಿದೆ.

ರಾಜ್ಯಪಾಲರು ಕೆಲವು ಸ್ಪಷ್ಟನೆಗಳನ್ನು ಕೋರಿ ಮಸೂದೆ ವಾಪಾಸ್‌ ಕಳುಹಿಸಿದ್ದು, ಸ್ಪಷ್ಟನೆಗಳೊಂದಿಗೆ ಪುನಃ ಒಪ್ಪಿಗೆ ಕೋರಿ ರಾಜ್ಯಪಾಲರಿಗೆ ಕಳುಹಿಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌.ಕೆ.ಪಾಟೀಲ ಅವರು ಹೇಳಿದರು.

Comments are closed.