Honeytrap Case: ಹನಿಟ್ರ್ಯಾಪ್‌ ಪ್ರಕರಣ ತನಿಖೆಗೆ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ!

Share the Article

Honeytrap Case: ಕರ್ನಾಟಕ ಸರಕಾರದ ಸಚಿವರ ಮೇಲೆ ನಡೆದಿದೆ ಎನ್ನಲಾದ ಹನಿಟ್ರ್ಯಾಪ್‌ ಪ್ರಕರಣದ ಕುರಿತು ತನಿಖೆಗೆ ಆಗ್ರಹ ಮಾಡಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಇಂದು ವಜಾ ಮಾಡಿದೆ.

ಸುಪ್ರೀಂ ಕೋರ್ಟ್‌ನ ನ್ಯಾ.ವಿಕ್ರಮ್‌ನಾಥ್‌ ನೇತೃತ್ವದ ತ್ರಿಸದಸ್ಯ ಪೀಠ ಅರ್ಜಿ ವಜಾ ಮಾಡಿದರ ಜೊತೆಗೆ ವಿಚಾರಣೆ ವೇಳೆ ಅರ್ಜಿದಾರ ಬಿನಯ್‌ ಕುಮಾರ್‌ ಸಿಂಗ್‌ ಅವರನ್ನು ತರಾಟೆಗೆ ತೆಗೆದುಕೊಂಡಿದೆ.

ನೀವು ಜಾರ್ಖಂಡ್‌ ಮೂಲದವರು, ಕರ್ನಾಟಕಕ್ಕೂ ನಿಮಗೂ ಏನು ಸಂಬಂಧ? ನ್ಯಾಯಾಧೀಶರು ಯಾಕೆ ಹನಿಟ್ರ್ಯಾಪ್‌ಗೆ ಒಳಗಾಗುತ್ತಾರೆ? ಪೊಲಿಟಿಕಲ್‌ ನಾನ್‌ಸೆನ್ಸ್‌ಗಳನ್ನು ವಿಚಾರಣೆ ಮಾಡಲು ನಾವು ಇಲ್ಲಿ ಕೂತಿಲ್ಲ. ಅದನ್ನು ನ್ಯಾಯಾಧೀಶರು ನೋಡಿಕೊಳ್ತಾರೆ. ಸುಪ್ರೀಂ ಕೋರ್ಟ್‌ಗೆ ಮಾಡಲು ಸಾಕಷ್ಟು ಕೆಲಸ ಇದೆ ಎಂದು ತರಾಟೆಗೆ ತೆಗೆದುಕೊಂಡಿದೆ.

ಕರ್ನಾಟಕದಲ್ಲಿ ಹಿರಿಯ ಸಚಿವರು, ಶಾಸಕರು, ರಾಜಕೀಯ ಮುಖಂಡರು ಮತ್ತು ನ್ಯಾಯಮೂರ್ತಿಗಳು ಸೇರಿದಂತೆ 48 ಜನರನ್ನು ಗುರಿಯಾಗಿಟ್ಟುಕೊಂಡು ಹನಿಟ್ರ‍್ಯಾಪ್ ಪ್ರಕರಣ ನಡೆದಿದೆ. ಈ ಬಗ್ಗೆ ಸಚಿವರೇ ವಿಧಾನಸಭೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಹೀಗಾಗೀ ಈ ಬಗ್ಗೆ ಸಿಬಿಐ ಅಥಾವ ಹೈಕೋರ್ಟ್ ನ್ಯಾಯಧೀಶರ ನೇತೃತ್ವದಲ್ಲಿ ಎಸ್‌ಐಟಿ ತನಿಖೆಗೆ ನಿರ್ದೇಶನ ನೀಡಬೇಕು ಎಂದು ಅರ್ಜಿದಾರರು ಸುಪ್ರೀಂಗೆ ಮನವಿ ಮಾಡಿದ್ದರು.

Comments are closed.