Bengaluru: PUC, SSLC ನಕಲಿ ಅಂಕಪಟ್ಟಿ ನೀಡುತ್ತಿದ್ದ ಜಾಲ ಪತ್ತೆ: ಮೂವರ ಬಂಧನ

Bengaluru: ಪಿಯುಸಿ ಮತ್ತು ಎಸ್ಎಸ್ಎಲ್ಸಿ ತತ್ಸಮಾನ ಎಂದು ನಕಲಿ ಅಂಕಪಟ್ಟಿ ನೀಡುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ಲದೇ, ಕರ್ನಾಟಕ ಮಾಧ್ಯಮಿಕ ಮತ್ತು ಉನ್ನತ ಶಿಕ್ಷಣ ಮಂಡಳಿ ಎಂದು ಸಂಸ್ಥೆ ಹುಟ್ಟುಹಾಕಿದ್ದರು. ಆರೋಪಿಗಳು ಬೆಂಗಳೂರು, ಬೆಳಗಾವಿ, ಧಾರವಾಡದಲ್ಲಿಂದ್ದುಕೊಂಡು ಈ ಅಕ್ರಮ ದಂಧೆ ನಡೆಸುತ್ತಿದ್ದರು.
ಆರೋಪಿಗಳು ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಸ್ಟಡಿ ಸೆಂಟರ್ಗಳನ್ನು ತೆರೆದು ನಕಲಿ ಅಂಕಪಟ್ಟಿ ನೀಡುತ್ತಿದ್ದರು. ಸ್ಟಡಿ ಸೆಂಟರ್ನಲ್ಲಿ ಕರೆಸ್ಪಾಂಡಿಂಗ್ ವ್ಯಾಸಂಗ ಮಾಡುವರನ್ನು ದಾಖಲಿಸಿಕೊಳ್ಳುತ್ತಿದ್ದರು. ನಂತರ ಕೆಲವೇ ದಿನಗಳದಲ್ಲಿ ಇವರಿಗೆ ಕರ್ನಾಟಕ ಮಾಧ್ಯಮಿಕ ಮತ್ತು ಉನ್ನತ ಶಿಕ್ಷಣ ಮಂಡಳಿ ಹೆಸರಿನಲ್ಲಿ ಆರೋಪಿಗಳು ಅಂಕಪಟ್ಟಿಗಳನ್ನು ನೀಡುತಿದ್ದರು. ಆರೋಪಿಗಳು 5ರಿಂದ 10 ಸಾವಿರ ಹಣ ಪಡೆದು ನಕಲಿ ಅಂಕಪಟ್ಟಿ ನೀಡುತ್ತಿದ್ದರು. ಆರೋಪಿಗಳು ಧಾರವಾಡದಲ್ಲಿ ಮತ್ತು ಬೆಂಗಳೂರಿನಲ್ಲಿ ಅಂಕಪಟ್ಟಿ ಪ್ರಿಂಟ್ ಮಾಡಿರುವುದು ಪತ್ತೆಯಾಗಿದೆ. ಆರೋಪಿಗಳು ಸುಮಾರು 350 ಜನರಿಗೆ ನಕಲಿ ಅಂಕಪಟ್ಟಿ ನೀಡಿರುವುದು ತಿಳಿದುಬಂದಿದೆ. ಇವರಿಂದ ನಕಲಿ ಅಂಕಪಟ್ಟಿ ಪಡೆದವರು ಸಾರಿಗೆ ಇಲಾಖೆ, ಶಿಶು ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯಲ್ಲಿ ಕೆಲಸಕ್ಕೆ ಸೇರಿದ್ದಾರೆ.
Comments are closed.