One Nation, one Vote: ‘ಒಂದು ರಾಷ್ಟ್ರ, ಒಂದು ಚುನಾವಣೆ: ಜೆಪಿಸಿಯ ಅವಧಿ ವಿಸ್ತರಿಸುವ ಪ್ರಸ್ತಾವನೆ ಲೋಕಸಭೆಯಲ್ಲಿ ಅಂಗೀಕಾರ

One Nation, one Vote: ‘ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆಗಳ ಜಂಟಿ ಸಂಸದೀಯ ಸಮಿತಿಯ (ಜೆಪಿಸಿ) ಅವಧಿಯನ್ನು 2025ರ ಮಳೆಗಾಲದ ಅಧಿವೇಶನದ(Session) ಕೊನೆಯ ವಾರದ ಮೊದಲ ದಿನಕ್ಕೆ ವಿಸ್ತರಿಸುವ ಪ್ರಸ್ತಾವನೆಯನ್ನು ಲೋಕಸಭೆ(Lok Sabha) ಅಂಗೀಕರಿಸಿದೆ. ಜೆಪಿಸಿ ಅಧ್ಯಕ್ಷ ಪಿಪಿ ಚೌಧರಿ(P P Chaudry) ಈ ಪ್ರಸ್ತಾವನೆಯನ್ನು ಮಂಡಿಸಿದ್ದರು. ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವ ಮಸೂದೆಯನ್ನು ಡಿಸೆಂಬರ್ 2024ರಲ್ಲಿ ಜೆಪಿಸಿಗೆ ಕಳುಹಿಸಲಾಗಿತ್ತು.
“ಒಂದು ರಾಷ್ಟ್ರ, ಒಂದು ಚುನಾವಣೆ” ಮಸೂದೆಗಳ ‘ಸಂವಿಧಾನ (129ನೇ ತಿದ್ದುಪಡಿ) ಮಸೂದೆ, 2024 ಮತ್ತು ಕೇಂದ್ರಾಡಳಿತ ಪ್ರದೇಶಗಳ ಕಾನೂನುಗಳು (ತಿದ್ದುಪಡಿ) ಮಸೂದೆ, 2024’) ವರದಿಯನ್ನು ಮಂಡಿಸಲು ಸಮಯವನ್ನು ವಿಸ್ತರಿಸುವ ಕುರಿತು ಜಂಟಿ ಸಂಸದೀಯ ಸಮಿತಿ (ಜೆಪಿಸಿ) ಅಧ್ಯಕ್ಷ ಪಿಪಿ ಚೌಧರಿ ಮಂಗಳವಾರ ಲೋಕಸಭೆಯಲ್ಲಿ ಪ್ರಸ್ತಾವನೆಯನ್ನು ಮಂಡಿಸಿದ್ದರು.
ಪರಿಗಣನೆಯಲ್ಲಿರುವ ಮಸೂದೆಗಳಲ್ಲಿ ಸಂವಿಧಾನ (ನೂರ ಇಪ್ಪತ್ತೊಂಬತ್ತನೇ ತಿದ್ದುಪಡಿ) ಮಸೂದೆ, 2024 ಮತ್ತು ಕೇಂದ್ರಾಡಳಿತ ಪ್ರದೇಶಗಳ ಕಾನೂನುಗಳು (ತಿದ್ದುಪಡಿ) ಮಸೂದೆ, 2024 ಸೇರಿವೆ.
‘ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆಯನ್ನು ಪರಿಶೀಲಿಸುವ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ಇಂದು ಮಧ್ಯಾಹ್ನ 3 ಗಂಟೆಗೆ ಸಭೆ ಸೇರಲಿದೆ. ಸಭೆಯಲ್ಲಿ, ಭಾರತದ ಅಟಾರ್ನಿ ಜನರಲ್ ಆರ್ ವೆಂಕಟರಮಣಿ ಮತ್ತು ದೆಹಲಿ ಹೈಕೋರ್ಟ್‌ನ ಮಾಜಿ ಮುಖ್ಯ ನ್ಯಾಯಮೂರ್ತಿ ಮತ್ತು ಟೆಲಿಕಾಂ ವಿವಾದ ಇತ್ಯರ್ಥ ಮತ್ತು ಮೇಲ್ಮನವಿ ನ್ಯಾಯಮಂಡಳಿಯ (ಟಿಡಿಎಸ್‌ಎಟಿ) ಪ್ರಸ್ತುತ ಅಧ್ಯಕ್ಷರಾಗಿರುವ ನ್ಯಾಯಮೂರ್ತಿ ಡಿಎನ್ ಪಟೇಲ್ ಅವರು ಜೆಪಿಸಿ ಮುಂದೆ ಪ್ರಾತಿನಿಧ್ಯ ಸಲ್ಲಿಸಲಿದ್ದಾರೆ.
ಮೊದಲನೆಯದಾಗಿ, ಅವರು ಪ್ರಸ್ತುತ ಟೆಲಿಕಾಂ ವಿವಾದ ಇತ್ಯರ್ಥ ಮತ್ತು ಮೇಲ್ಮನವಿ ನ್ಯಾಯಮಂಡಳಿಯ (ಟಿಡಿಎಸ್‌ಎಟಿ) ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ದೆಹಲಿ ಹೈಕೋರ್ಟ್‌ನ ಮಾಜಿ ಮುಖ್ಯ ನ್ಯಾಯಮೂರ್ತಿ ಡಿ.ಎನ್. ಪಟೇಲ್ ಅವರನ್ನು ಭೇಟಿ ಮಾಡಲಿದ್ದಾರೆ.
Comments are closed.