of your HTML document.

Nandini : ನಂದಿನಿ ಹಾಲಿನ ದರ ಏರಿಕೆಗೆ ಸರ್ಕಾರ ಗ್ರೀನ್ ಸಿಗ್ನಲ್- ಎಷ್ಟು ಏರಿಕೆ ಗೊತ್ತಾ?

Nandini : ನಂದಿನಿ ಹಾಲಿನ ದರ ಏರಿಸುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸುದೀರ್ಘ ಸಭೆ ನಡೆದಿದ್ದು ಈ ಸಭೆಯಲ್ಲಿ ಸರ್ಕಾರವು ಹಾಲಿನ ದರವನ್ನು ಏರಿಸಲು ಗ್ರೀನ್ ಸಿಗ್ನಲ್ ನೀಡಿದೆ ಎಂದು ತಿಳಿದುಬಂದಿದೆ.

ಹೌದು, ಬೆಲೆ ಏರಿಕೆಗೆ ಸುಸ್ತಾಗಿರುವ ರಾಜ್ಯದ ಜನರಿಗೆ ಮತ್ತೊಂದು ಶಾಕಿಂಗ್ ನ್ಯೂಸ್‌ ಎದುರಾಗಿದ್ದು ರಾಜ್ಯದಲ್ಲಿ ಹಾಲಿನ ದರ ಹೆಚ್ಚಿಸಲು ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಈ ಮೂಲಕ ರಾಜ್ಯದಲ್ಲಿ ನಂದಿನಿ ಹಾಲಿನ ದರ ಪ್ರತಿ ಲೀಟರ್‌ಗೆ 4 ರೂಪಾಯಿ ಹೆಚ್ಚಳಕ್ಕೆ ರಾಜ್ಯ ಸರ್ಕಾರ ತೀರ್ಮಾನ ಮಾಡಿದೆ.

ರಾಜ್ಯದಲ್ಲಿ ಸದ್ಯ ಹೋಮೋಜಿನೆಸ್ಟ್ ಟೋನ್ಡ್ ಹಾಲು ಅರ್ಧ ಲೀಟರ್ ₹24 ರೂಪಾಯಿ. ಹೋಮೋಜಿನೆಸ್ಟ್ ಟೋನ್ಡ್ ಹಾಲು ಒಂದು ಲೀಟರ್ ₹45 ರೂಪಾಯಿ ಇದೆ. ಹೊಸ ದರ ಜಾರಿಗೆ ಬಂದ್ರೆ ಅರ್ಧ ಲೀಟರ್ 26 ಮತ್ತು ಒಂದು ಒಂದು ಲೀಟರ್ ಹಾಲು 49 ರೂಪಾಯಿ ಆಗಲಿದೆ.

 

ಅಂದಹಾಗೆ ಬಹುದಿನಗಳಿಂದ ರೈತರು ಹಾಗೂ ಹಾಲು ಒಕ್ಕೂಟಗಳ ಒತ್ತಡದಿಂದ ನಂದಿನಿ ಉತ್ಪನ್ನಗಳ ದರ ಏರಿಕೆಯ ಪ್ರಸ್ತಾಪ ಕೇಳಿಬಂದಿತ್ತು. ಬಜೆಟ್‌ ಅಧಿವೇಶನ ಮುಗಿಯುತ್ತಿದ್ದಂತೆಯೇ ದರ ಏರಿಕೆ ಆಗಲಿದೆ ಎಂಬ ಮಾತು ಕೇಳಿ ಬಂದಿತ್ತು. ಇದರ ಬೆನ್ನಲ್ಲೇ ಇಂದು ನಡೆದ ಸಚಿವ ಸಂಪುಟ ಸಭೆಯಯಲ್ಲಿ ನಂದಿನ ಹಾಲಿನ ದರ ಪ್ರತಿ ಲೀಟರ್​ಗೆ 4 ರೂಪಾಯಿ ಏರಿಕೆಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ.

Comments are closed.