of your HTML document.

Ranya Rao: ರನ್ಯಾ ರಾವ್‌ ಪ್ರಕರಣ: ಬಳ್ಳಾರಿ ಚಿನ್ನದ ವ್ಯಾಪಾರಿ ಬಂಧನ!

Ranya Rao: ಡಿಜಿಪಿ ಮಲಮಗಳು ಹಾಗೂ ನಟಿ ರನ್ಯಾ ರಾವ್ ವಿರುದ್ಧದ ಚಿನ್ನ ಕಳ್ಳ ಸಾಗಣೆ ಪ್ರಕರಣ ಸಂಬಂಧ ಬಳ್ಳಾರಿ ಜಿಲ್ಲೆಯ ಚಿನ್ನಾಭರಣ ವ್ಯಾಪಾರಿ ಯೊಬ್ಬನನ್ನು ಕಂದಾಯ ಗುಪ್ತಚರ ಜಾರಿ ನಿರ್ದೇಶನಾ ಲಯ (ಡಿಆರ್‌ಐ) ಬಂಧಿಸಿದೆ.

ಇದರೊಂದಿಗೆ ಈ ಪ್ರಕರಣದಲ್ಲಿ ಮೂರನೇ ಆರೋಪಿ ಬಂಧನ ಇದಾಗಿದೆ. ಬಳ್ಳಾರಿ ನಗರದ ಬ್ರಾಹ್ಮನ್ ರಸ್ತೆಯ ಮಹೇಂದ್ರ ಕುಮಾರ್‌ಜೈನ್ ಪುತ್ರ ಸಾಹಿಲ್ ಸಕಾರಿಯಾ ಜೈನ್ ಬಂಧಿತನಾಗಿದ್ದು, ವಿದೇಶದಿಂದ ಕಳ್ಳ ಸಾಗಣೆ ಮೂಲಕ ಚಿನ್ನ ಮಾರಾಟದಲ್ಲಿ ರನ್ಯಾರವರಿಗೆ ಆತ ನೆರವು ನೀಡಿದ್ದ. ಈ ಹಿನ್ನೆಲೆಯಲ್ಲಿ ಸಾಹಿಲ್‌ನನ್ನು ಬಂಧಿಸಿ ಹೆಚ್ಚಿನ ತನಿಖೆ ಸಲುವಾಗಿ ನಾಲ್ಕು ದಿನಗಳು ಡಿಆರ್‌ಐ ಕಸ್ಟಡಿಗೆ ಪಡೆದಿದೆ ಎಂದು ತಿಳಿದು ಬಂದಿದೆ.

ಹಲವು ವರ್ಷಗಳಿಂದ ಬಳ್ಳಾರಿ ನಗರದಲ್ಲಿ ಚಿನ್ನಾಭರಣ ಮಾರಾಟ ಮಳಿಗೆಯನ್ನು ಸಾಹಿಲ್ ಕುಟುಂಬ ನಡೆಸುತ್ತಿದೆ. ತನ್ನ ಸ್ನೇಹಿತರ ಮೂಲಕ ಆತನಿಗೆ ರನ್ಯಾ ಪರಿಚಯವಾಗಿದೆ. ಹಣ ದಾಸೆಗೆ ಚಿನ್ನ ಕಳ್ಳ ಸಾಗಣೆ ಕೃತ್ಯಕ್ಕೆ ಆತಸಹಕರಿಸಿದ್ದಾನೆ. ಅಂತೆಯೇದುಬೈನಿಂದ ಕಳ್ಳ ಮಾರ್ಗದಲ್ಲಿ ಬೆಂಗಳೂರಿಗೆ ಚಿನ್ನ ತರುತ್ತಿದ್ದ ರನ್ಯಾ, ನಂತರ ಸಾಹಿಲ್ ಮೂಲಕ ಆ ಚಿನ್ನವನ್ನು ವಿಲೇವಾರಿ ಮಾಡುತ್ತಿದ್ದರು

Comments are closed.