Festival: ಯುಗಾದಿ ಹಾಗೂ ರಂಜಾನ್‌ ಹಬ್ಬದ ಪ್ರಯುಕ್ತ 2,000 ಬಸ್‌ ವ್ಯವಸ್ಥೆ!

Share the Article

Festival: ಯುಗಾದಿ ಹಾಗೂ ರಂಜಾನ್‌ ಹಬ್ಬದ (Festival) ಪ್ರಯುಕ್ತ ಸಾರ್ವಜನಿಕರ ಅನುಕೂಲಕ್ಕಾಗಿ ಕೆಎಸ್‌ಆರ್‌ಟಿಸಿ 2,000 ಬಸ್‌ಗಳನ್ನು ರಸ್ತೆಗಿಳಿಸಲಿದ್ದು, ಮಾರ್ಚ್‌ 28 ರಿಂದ 30ರ ವರೆಗೆ ಬೆಂಗಳೂರಿನಿಂದ ವಿವಿಧ ಪ್ರದೇಶಗಳಿಗೆ ಹಾಗೂ ಮಾರ್ಚ್‌ 31 ರಂದು ವಿವಿಧೆಡೆಯಿಂದ ಬೆಂಗಳೂರಿಗೆ ವಿಶೇಷ ಸಾರಿಗೆ ವ್ಯವಸ್ಥೆ ಇರಲಿದೆ.

ಕುಕ್ಕೆ ಸುಬ್ರಮಣ್ಯ, ಧರ್ಮಸ್ಥಳ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ, ಹೊರರಾಜ್ಯಗಳ ಮಧುರೈ, ಕುಂಭಕೋಣಂ, ಚೆನ್ನೈ, ಕೊಯಮತ್ತೂರ್, ತಿರುಚ್ಚಿ, ಪಾಲಕ್ಕಾಡ್, ತ್ರಿಶೂರ್, ಎರ್ನಾಕುಲಂ, ತಿರುಪತಿ, ವಿಜಯವಾಡ ಸಹಿತ ವಿವಿಧೆಡೆ ವಿಶೇಷ ಬಸ್‌ಗಳು ಸಂಚರಿಸಲಿವೆ.

Comments are closed.