Congress workers clash: ಒಡಿಶಾದಲ್ಲಿ ಶಾಸಕರ ಅಮಾನತು ವಿಚಾರ: ಪೊಲೀಸರೊಂದಿಗೆ ಕಾಂಗ್ರೆಸ್ ಕಾರ್ಯಕರ್ತರ ಘರ್ಷಣೆ

Congress workers clash: ಒಡಿಶಾ(Odisha) ವಿಧಾನಸಭೆಯ(Assambly) ಹೊರಗೆ ಪೊಲೀಸ್ ಸಿಬ್ಬಂದಿ(Police) ಜತೆ ಕಾಂಗ್ರೆಸ್ ಕಾರ್ಯಕರ್ತರು ಗುರುವಾರ ಘರ್ಷಣೆ ನಡೆಸಿದ್ದಾರೆ. ಪ್ರತಿಭಟನಾಕಾರರು ಪೊಲೀಸರ ಮೇಲೆ ಕುರ್ಚಿಗಳನ್ನು ಎಸೆಯುತ್ತಿರುವ ವಿಡಿಯೋವನ್ನು ANI ಹಂಚಿಕೊಂಡಿದೆ. ಏತನ್ಮಧ್ಯೆ, ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದು, ವಿಧಾನಸಭೆಯಿಂದ 14 ಕಾಂಗ್ರೆಸ್ ಶಾಸಕರನ್ನು ಅಮಾನತುಗೊಳಿಸಿರುವುದರ ವಿರುದ್ಧ ಪ್ರತಿಭಟನೆ ನಡೆಸಲಾಗಿತ್ತು.
ಅಮಾನತು ವಿಚಾರಕ್ಕೆ ಕಾಂಗ್ರೆಸ್ ಶಾಸಕರು ಬುಧವಾರ ಕೂಡ ಪೊಲೀಸರ ಜತೆ ಘರ್ಷಣೆ ನಡೆಸಿದ್ದರು. ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಜಲಫಿರಂಗಿಗಳನ್ನು ಪ್ರಯೋಗಿಸಿದ್ದಾರೆ.
ಕಾಂಗ್ರೆಸ್ ಕಾರ್ಯಕರ್ತರು ವಿಧಾನಸಭೆ ಕಟ್ಟಡಕ್ಕೆ ಹೋಗುವಾಗ ಬ್ಯಾರಿಕೇಡ್ ಅನ್ನು ಮುರಿದು ಇನ್ನೊಂದನ್ನು ಮುರಿಯಲು ಪ್ರಯತ್ನಿಸಿದ ನಂತರ ಪೊಲೀಸ್ ಮಧ್ಯಪ್ರವೇಶ ಮಾಡಿದ್ದಾರೆ.
ಪ್ರತಿಭಟನಾಕಾರರು ಭದ್ರತಾ ಸಿಬ್ಬಂದಿಯ ಮೇಲೆ ಪ್ಲಾಸ್ಟಿಕ್ ಕುರ್ಚಿಗಳನ್ನು ಎಸೆದಾಗ ಪರಿಸ್ಥಿತಿ ವಿಕೋಪಕ್ಕೆ ಹೋಯಿತು. ವಿಧಾನಸಭೆಗೆ ಹೋಗುವ ಎಲ್ಲಾ ಮಾರ್ಗಗಳಲ್ಲಿ 80 ತುಕಡಿ ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ಭುವನೇಶ್ವರ ಉಪ ಪೊಲೀಸ್ ಆಯುಕ್ತ (ಡಿಸಿಪಿ) ಜಗಮೋಹನ್ ಮೀನಾ ಹೇಳಿದ್ದಾರೆ. ಕಾನೂನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಅವರು ಎಚ್ಚರಿಸಿದ್ದಾರೆ ಎಂದು ವರದಿಯಾಗಿದೆ.
https://x.com/i/status/1905172579595301135
Comments are closed.