Udupi: ವಿದ್ಯಾರ್ಥಿನಿಯನ್ನ ಅಪಹರಿಸಿ ಮದುವೆಗೆ ಪ್ರಯತ್ನ – ಲವ್ ಜಿಹಾದ್ ಆರೋಪ !!

Udupi: ಉಡುಪಿ ಪೊಲೀಸ್ ಠಾಣೆಯಲ್ಲಿ ಯುವತಿಯ ತಂದೆ ಒಬ್ಬರು ಅನ್ಯಕೋಮಿನ ಯುವಕನೊಬ್ಬ ತನ್ನ ಮಗಳನ್ನು ಅಪಹರಿಸಿ ಮದುವೆಯಾಗಲು ಯತ್ನಿಸಿದ್ದಾನೆ ಎಂದು ಆರೋಪಿಸಿ ದೂರದಾಕಲಿಸಿದ್ದಾರೆ. ಈ ಬೆನ್ನಲ್ಲೇ ಲವ್ ಜಿಹಾದ್ ಆರೋಪ ಕೇಳಿ ಬಂದಿದೆ.
ಹೌದು, ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ( Udupi Police Station ) ಕ್ರೈಸ್ತ ಧರ್ಮಕ್ಕೆ ಸೇರಿದ ಗಾಡ್ವಿನ್ ದೇವದಾಸ್ ದೂರು ದಾಖಲಿಸಿದ್ದು ಉಡುಪಿಯ ಕರಂಬಳ್ಳಿ ನಿವಾಸಿ ಮೊಹಮ್ಮದ್ ಅಕ್ರಮ್ ಎಂಬವನು ನನ್ನ ಮಗಳನ್ನು ಅಪಹರಿಸಿದ್ದಾನೆ. ಹಿಂದೆ ಅಕ್ರಮ್ ಮೊಹಮ್ಮದ್ ವಿರುದ್ಧ ಲೈಂಗಿಕ ಕಿರುಕುಳ ದೂರು ನೀಡಿದ್ದರು. ಈ ಸೇಡು ತೀರಿಸಿಕೊಳ್ಳಲು ಅಕ್ರಮ್ ಮೊಹಮ್ಮದ್ ನನ್ನ ಮಗಳನ್ನು ಅಪಹರಿಸಿ, ಬೆದರಿಸಿ ವಿವಾಹ ನೊಂದಣಿಗೆ ಸಹಿ ಹಾಕಿಸಿದ್ದಾನೆ ಎಂದು ದೂರು ನೀಡಿದ್ದಾರೆ.
ಅಲ್ಲದೆ “ನಮ್ಮ ಮಗಳಿಗೆ ಅಕ್ರಮ್ ಮೊಹಮ್ಮದ್ ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾಗಿ, ಕಳೆದ ಐದು ವರ್ಷಗಳಿಂದ ನಿರಂತರ ಸಂಪರ್ಕದಲ್ಲಿದ್ದಾರೆ. ನಮ್ಮ ಮಗಳನ್ನು ಪುಸಲಾಯಿಸಿ ಅಶ್ಲೀಲ ಫೋಟೋ ವಿಡಿಯೋ ತೆಗೆದಿದ್ದಾನೆ. ಅಶ್ಲೀಲ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ನಮಗೆ ಧಮ್ಕಿ ಹಾಕಿದ್ದಾನೆ. ಒಮ್ಮೆ ನಮ್ಮ ಮಗಳನ್ನು ತಂದು ನಮ್ಮ ಮುಂದೆ ನಿಲ್ಲಿಸಿ. ಆರೋಪಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾನೆ. ಆತನನ್ನು ಕೊಡಲೇ ಬಂಧಿಸಿ. ಮೊಹಮ್ಮದ್ ಅಕ್ರಂ ಗರುಡ ಗ್ಯಾಂಗ್ನ ಸದಸ್ಯ ಎಂಬ ಮಾಹಿತಿ ಇದೆ. ಪೊಲೀಸರ ಬಳಿ ಹೋದರೆ, ಇಬ್ಬರೂ ವಯಸ್ಕರು, ಕ್ರಮ ಕೈಗೊಳ್ಳು ಸಾಧ್ಯವಿಲ್ಲ ಎನ್ನುತ್ತಾರೆ. ಇಬ್ಬರು ಜೊತೆಗೆ ಸುರಕ್ಷಿತವಾಗಿದ್ದಾರೆ ಎಂದು ವಿಡಿಯೋ ತೋರಿಸಿ ಪೊಲೀಸರು ನಮ್ಮನ್ನು ವಾಪಸ್ ಕಳುಹಿಸಿದ್ದಾರೆ. ಉಡುಪಿ ಎಸ್‌ಪಿ ಡಾ. ಅರುಣ್ ಕುಮಾರ್ ಯಾವ ಕ್ರಮ ತೆಗೆದುಕೊಂಡಿಲ್ಲ” ಎಂದು ಹೇಳಿದ್ದಾರೆ.
ಇಷ್ಟೇ ಅಲ್ಲದೆ ಅಪ್ರಾಪ್ತೆಯಾಗಿದ್ದಾಗಲೇ ನಮ್ಮ ಮಗಳಿಗೆ ಅಕ್ರಂ ಕಿರುಕುಳ ನೀಡಿದ್ದನು. ಐದು ವರ್ಷದ ಹಿಂದೆ ಪೋಕ್ಸೋ ಕೇಸು ದಾಖಲು ಮಾಡಿದ್ದೇವು. ಲೈಂಗಿಕ ಕಿರುಕುಳ ನೀಡಿಲ್ಲ ಎಂಬ ಕಾರಣಕ್ಕೆ ಕೇಸು ವಜಾಗೊಂಡಿತ್ತು. ಇದೀಗ, ಸೇಡು ತೀರಿಸಲು ಅಪಹರಿಸಿದ್ದಾನೆ” ಎಂದು ಪೋಷಕರಾದ ಮೇರುಸ್ ಪುಷ್ಪಲತಾ ಮತ್ತು ಗಾಡ್ವಿನ್ ದೇವದಾಸ್ ಆರೋಪಿಸಿದ್ದಾರೆ.
Comments are closed.