of your HTML document.

BJP: ಯತ್ನಾಳ್ ಉಚ್ಚಾಟನೆ – ಬಿಜೆಪಿ ರೆಬಲ್ಸ್ ನಾಯಕರಿಂದ ಹೊಸ ಪಕ್ಷ ಸ್ಥಾಪನೆ?

BJP: ಹಿಂದುತ್ವದ ಫೈಯರ್ ಬ್ರಾಂಡ್, ಬಿಜೆಪಿ ನಾಯಕ, ಮಾಜಿ ಕೇಂದ್ರ ಸಚಿವ ಬಸವನಗೌಡ ಪಾಟೀಲ್ ಯತ್ನಾಳ್ ಅವರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಿ ಬಿಜೆಪಿ ಆದೇಶ ಹೊರಡಿಸಿದೆ. ಈ ಬೆನ್ನಲ್ಲೇ ರಾಜ್ಯಾದ್ಯಂತ ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ. ಇದರ ನಡುವೆಯೇ ಬಿಜೆಪಿಯ ರೆಬೆಲ್ಸ್ ನಾಯಕರು ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರ ವಿರುದ್ಧ ಯತ್ನಾಡ್ ಬಣ ತೊಡೆತಟ್ಟಿತ್ತು. ಈ ಬಣದಲ್ಲಿ ರಮೇಶ್ ಜಾರಕಿಹೊಳಿ, ಕುಮಾರ್ ಬಂಗಾರಪ್ಪ, ಅರವಿಂದ್ ಲಿಂಬಾವಳಿ ಸೇರಿದಂತೆ ರಾಜ್ಯದ ಪ್ರಮುಖ ಬಿಜೆಪಿ ನಾಯಕರು ಇದ್ದರು. ಯತ್ನಾಳ್ ಇವರೆಲ್ಲರ ನಾಯಕರಂತೆ ಗುರುತಿಸಿಕೊಂಡಿದ್ದರು. ಇದೀಗ ಯತ್ನಾಳ್ ಉಚ್ಚಾಟನೆ ಬೆನ್ನಲ್ಲೇ ಈ ಬಣದ ನಾಯಕರ ನಡೆ ತೀವ್ರ ಕುತೂಹಲ ಕೆರಳಿಸಿದೆ.

ಯತ್ನಾಳ್ ರನ್ನು ಪಕ್ಷದಿಂದ ಉಚ್ಛಾಟಿಸಿದ ಬೆನ್ನಲ್ಲೇ ಈ ನಾಯಕರೆಲ್ಲರೂ ಒಗ್ಗಟ್ಟಾಗಿದ್ದಾರೆ. ನಾಳೆ ಭಿನ್ನ ನಾಯಕರು ಸಭೆ ಸೇರುವ ನಿರ್ಧಾರ ಮಾಡಿದ್ದಾರೆ. ಮುಂದಿನ ನಡೆಯೇನು ಎಂದು ಸಭೆಯಲ್ಲಿ ಚರ್ಚಿಸಲು ತೀರ್ಮಾನಿಸಿದ್ದಾರೆ. ಅಂದಹಾಗೆ ಯತ್ನಾಳ್ ಒಬ್ಬಂಟಿಯಲ್ಲ ಅವರ ಜೊತೆಗೆ ನಾವಿದ್ದೇವೆ ಎಂದು ರಮೇಶ್ ಜಾರಕಿಹೊಳಿ ಈಗಾಗಲೇ ಘೋಷಿಸಿದ್ದಾರೆ. ಹೀಗಾಗಿ ಈ ನಾಯಕರು ಯತ್ನಾಳ್ ಉಚ್ಛಾಟನೆ ಆದೇಶವನ್ನು ಹಿಂಪಡೆಯಲು ಹೈಕಮಾಂಡ್ ಗೆ ಒತ್ತಡ ಹೇರುತ್ತಾ ಅಥವಾ ಹೊಸ ಪಕ್ಷ ಸ್ಥಾಪನೆ ಬಗ್ಗೆ ಮಾತುಕತೆ ಮಾಡುತ್ತಾರಾ ಕಾದುನೋಡಬೇಕಿದೆ.

Comments are closed.