of your HTML document.

Holiday : ಏ. 14 ಅಂಬೇಡ್ಕರ್ ಜಯಂತಿ – ಸಾರ್ವತ್ರಿಕ ರಜೆ ಘೋಷಿಸಿದ ಕೇಂದ್ರ ಸರ್ಕಾರ

Holiday : ಏ.14 ರಂದು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜನ್ಮ ಜಯಂತಿ ಪ್ರಯುಕ್ತ ಭಾರತದಾದ್ಯಂತ ಕೇಂದ್ರದ ಎಲ್ಲಾ ಸರ್ಕಾರಿ ಕಚೇರಿಗಳಿಗೆ ಸಾರ್ವತ್ರಿಕ ರಜೆ ಘೋಷಿಸಲಾಗಿದೆ.

ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮದಿನದ ಅಂಗವಾಗಿ ಭಾರತದಾದ್ಯಂತ ಕೈಗಾರಿಕಾ ಸಂಸ್ಥೆಗಳು ಸೇರಿದಂತೆ ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳಿಗೆ ಸೋಮವಾರ ಅಂದರೆ, ಏಪ್ರಿಲ್ 14 ರಂದು ರಜೆ ಘೋಷಿಸಲು ನಿರ್ಧರಿಸಲಾಗಿದೆ. ಭಾರತ ಸರ್ಕಾರದ ಎಲ್ಲಾ ಸಚಿವಾಲಯಗಳು/ಇಲಾಖೆಗಳು ಮೇಲಿನ ನಿರ್ಧಾರವನ್ನು ಸಂಬಂಧಪಟ್ಟ ಎಲ್ಲರ ಗಮನಕ್ಕೆ ತರಲು ಸೂಚನೆ ನೀಡಲಾಗಿದೆ.

ಈ ಕುರಿತಾಗಿ ಕೇಂದ್ರ ಸಂಸ್ಕೃತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಈ ಘೋಷಣೆ ಮಾಡಿದ್ದು, ‘ಸಮಾಜದಲ್ಲಿ ಸಮಾನತೆಯ ಹೊಸ ಯುಗವನ್ನು ಸ್ಥಾಪಿಸಿದ ಸಂವಿಧಾನ ಶಿಲ್ಪಿ, ನಮ್ಮ ಬಾಬಾ ಸಾಹೇಬ್ ಪೂಜ್ಯ ಡಾ. ಭೀಮರಾವ್ ಅಂಬೇಡ್ಕರ್ ಜಿ ಅವರ ಜನ್ಮ ವಾರ್ಷಿಕೋತ್ಸವದಂದು ಸಾರ್ವಜನಿಕ ರಜೆ ಇರುತ್ತದೆ. ಬಾಬಾ ಸಾಹೇಬರ ಕಟ್ಟಾ ಅನುಯಾಯಿ, ಗೌರವಾನ್ವಿತ ಪ್ರಧಾನಿ ಜಿ ಈ ನಿರ್ಧಾರವನ್ನು ತೆಗೆದುಕೊಳ್ಳುವ ಮೂಲಕ ರಾಷ್ಟ್ರದ ಭಾವನೆಗಳನ್ನು ಗೌರವಿಸಿದ್ದಾರೆ’ ಎಂದು ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿದ್ದಾರೆ.

Comments are closed.