of your HTML document.

Yatnal: ಮುಂದಿನ ನಡೆ ಕಾಂಗ್ರೆಸ್ ಕಡೆಗೋ, ಜೆಡಿಎಸ್ ಕಡೆಗೋ? ನಿರ್ಧಾರ ತಿಳಿಸಿದ ಯತ್ನಾಳ್

Yatnal: ಬಿಜೆಪಿ ನಾಯಕ, ಹಿಂದೂ ಫೈಯರ್ ಬ್ರಾಂಡ್ ಬಸವನಗೌಡ ಪಾಟೀಲ್ ಅವರು ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಛಾಟನೆಗೊಂಡಿದ್ದಾರೆ. ಇದನ್ನಲೇ ರಾಜ್ಯ ರಾಜಕೀಯದಲ್ಲಿ ಹಲವು ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ಬಿಜೆಪಿಯ ರೆಬಲ್ಸ್ ನಾಯಕರು ಸಭೆ ಸೇರಿ ಯತ್ನಾಳ್ ಗೆ ಬೆಂಬಲ ನೀಡಿದ್ದಾರೆ. ಈ ಬೆನ್ನಲ್ಲೇ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಯತ್ನಾಳ್ ಅವರು ತಮ್ಮ ಮುಂದಿನ ನಡೆ ಏನೆಂದು ತಿಳಿಸಿದ್ದಾರೆ.

ಮಾಧ್ಯಮದವರು ತಮ್ಮ ಮುಂದಿನ ನಡೆ ಏನೆಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಯತ್ನಾಳ್ ಅವರು ‘ನಾನು ಎಂದಿಗೂ ಕಾಂಗ್ರೆಸ್ ಅಥವಾ ಜೆಡಿಎಸ್ ಸೇರುವುದಿಲ್ಲ. ಬಿಜೆಪಿ ನನ್ನನ್ನು ಗೌರವದಿಂದ ವಾಪಸ್ ಕರೆದರೆ, ನಾನು ಬಿಜೆಪಿಯಲ್ಲಿಯೇ ಇರುತ್ತೇನೆ. ಇಲ್ಲದಿದ್ದರೆ, ವಿಜಯದಶಮಿಯಂದು ನನ್ನ ನಿರ್ಧಾರವನ್ನು ಪ್ರಕಟಿಸುತ್ತೇನೆ’ ಎಂದು ಹೇಳಿದರು.

ಅಲ್ಲದೆ ‘ಮರಳಿ ಪಕ್ಷಕ್ಕೆ ಕರೆದುಕೊಳ್ಳುವಂತೆ ನಾನು ಯಾರನ್ನೂ ಬೇಡಿಕೊಳ್ಳುವುದಿಲ್ಲ. ನಾನು ಯಾವುದೇ ತಪ್ಪುಗಳನ್ನು ಮಾಡಿಲ್ಲ. ನಾವು ಪಕ್ಷಕ್ಕೆ ನಿಷ್ಠರಾಗಿದ್ದೇವೆ ಮತ್ತು ಅವರು ಕ್ಷಮೆಯಾಚಿಸಲು ಬಯಸಿದರೆ, ಕ್ಷಮೆ ಕೇಳಬೇಕಾದವರು ನಾನಲ್ಲ, ಬದಲಿಗೆ ಅವರೇ. ನಾನು ಯಾವಾಗಲೂ ಅಟಲ್ ಬಿಹಾರಿ ವಾಜಪೇಯಿ ಮತ್ತು ಎಲ್‌ಕೆ ಅಡ್ವಾಣಿಯಂತಹ ಬಿಜೆಪಿ ನಾಯಕರನ್ನು ಬೆಂಬಲಿಸಿದ್ದೇನೆ. ಮೋದಿ ಅವರನ್ನು ಬೆಂಬಲಿಸುತ್ತೇನೆ. ಅವರು ಒಳ್ಳೆಯ ನಾಯಕ. ಆದರೆ ಕೆಲಸ ಸಮಯದಲ್ಲಿ ಇಂತಹ ನಿರ್ಧಾರ ತೆಗೆದುಕೊಂಡಿದ್ದಾರೆ. ಮುಂದೆ ಏನಾಗುತ್ತದೆ ಎಂದು ಕಾದು ನೋಡುವ ಎಂದು ಅವರು ಉತ್ತರಿಸಿದ್ದಾರೆ.

Comments are closed.