Udupi: ಉಡುಪಿಯಲ್ಲಿ ಕೆಲಸ ಕೊಡಿಸುವ ನೆಪದಲ್ಲಿ ವೇಶ್ಯಾವಾಟಿಕೆ ದಂಧೆ!

Udupi: ಉಡುಪಿಯ (Udupi) ಶಿವಳ್ಳಿ ಗ್ರಾಮದ ಶಾರದ ನಗರದಲ್ಲಿರುವ ‘ಧರಿತ್ರಿ’ ಎಂಬ ಮನೆಯಲ್ಲಿ ಅಕ್ರಮ ವೇಶ್ಯಾವಾಟಿಕೆ ನಡೆಯುತ್ತಿದೆ ಎಂದು ಪೊಲೀಸರಿಗೆ ಲಭಿಸಿದ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಉಡುಪಿ ನಗರ ಠಾಣೆಯ ಪೊಲೀಸರು ಸಂತ್ರಸ್ತೆಯನ್ನು ರಕ್ಷಿಸಿ ಓರ್ವನನ್ನು ವಶಕ್ಕೆ ಪಡೆದಿದ್ದಾರೆ.
ಸತೀಶ್ ಎಂಬ ವ್ಯಕ್ತಿ ಸಂತ್ರಸ್ತೆಗೆ ಕೆಲಸ ಕೊಡಿಸುವ ನೆಪದಲ್ಲಿ ಮೂಡಬಿದ್ರೆಯಿಂದ ಉಡುಪಿಯ ಶಾರದ ನಗರದಲ್ಲಿರುವ ಶ್ರೀಲತಾ ಎಂಬಾಕೆಯ ಮನೆಗೆ ಕಳುಹಿಸಿದ್ದ. ಅಲ್ಲಿ ಶ್ರೀಲತಾ ಆಕೆಯನ್ನು ವೇಶ್ಯಾವಾಟಿಕೆಗೆ ಒತ್ತಾಯಿಸಿ, ಒಂದು ಕೋಣೆಯಲ್ಲಿ ಕೂಡಿ ಹಾಕಿದ್ದಳು ಎಂದು ತಿಳಿದುಬಂದಿದೆ.
ಈ ಕುರಿತು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳು ಅಕ್ರಮವಾಗಿ ವೇಶ್ಯಾವಾಟಿಕೆ ನಡೆಸಿ ಹಣ ಸಂಪಾದಿಸುವ ಉದ್ದೇಶದಿಂದ ಆಕೆಯನ್ನು ಒತ್ತಾಯ ಪೂರ್ವಕವಾಗಿ ಮನೆಯಲ್ಲಿ ಇರಿಸಿಕೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
Comments are closed.