Rain: ನಾಳೆ ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆ ಸಂಭವ!!

Rain: ರಾಜ್ಯದಲ್ಲಿ ನಿತ್ಯವೂ ಒಂದೊಂದು ಭಾಗದಲ್ಲಿ ಮಳೆಯ ಸಿಂಚನವಾಗುತ್ತಿದೆ. ಅಂತೆಯೇ ನಾಳೆ ಅಂದರೆ ಮಾ. 30ರಂದು ದಕ್ಷಿಣ ಕನ್ನಡ, ಕೊಡಗು, ಹಾಸನ, ಮೈಸೂರು ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಹಗುರ ಮಳೆಯಾಗುವ (Karnataka Weather) ಸಾಧ್ಯತೆ ಇದೆ.
ಇನ್ನೂ ರಾಜ್ಯದ ಉಳಿದ ಭಾಗಗಳಲ್ಲಿ ಒಣ ಹವೆ ಇರುವ ಸಾಧ್ಯತೆಯಿದೆ. ಅಲ್ಲದೆ ಬೆಂಗಳೂರು ಮತ್ತು ಸುತ್ತಮುತ್ತಲಿನ ಭಾಗದಲ್ಲಿ ಮುಂದಿನ 48 ಗಂಟೆಗಳ ಕಾಲ ಬಹುತೇಕ ಶುಭ್ರ ಆಕಾಶವಿರಲಿದ್ದು, ಸಂಜೆ ಭಾಗಶಃ ಮೋಡ ಕವಿದ ವಾತಾವರಣ (Rain News) ಇರುತ್ತದೆ ಇಂದು ಹವಾಮಾನ ಇಲಾಖೆ ಹೇಳಿದೆ.
Comments are closed.