of your HTML document.

Accident: ಕುಂದಾಪುರದ ಬಳ್ಕೂರಿನಲ್ಲಿ ಭೀಕರ ರಸ್ತೆ ಅಪಘಾತ: ಇಬ್ಬರು ಮೃತ್ಯು

Accident: ಕುಂದಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯ ಬಳ್ಕೂರು ಎಂಬಲ್ಲಿ ಕಾರು ಢಿಕ್ಕಿಯಾದ (Accident) ಪರಿಣಾಮ ದ್ವಿಚಕ್ರ ವಾಹನ ಸವಾರರಿಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಮಾ. 29 ರಂದು ಶುಕ್ರವಾರ ಸಂಜೆ ನಡೆದಿದೆ.

ಮೃತಪಟ್ಟ ದ್ವಿಚಕ್ರ ವಾಹನ ಸವಾರರನ್ನು ರಾಜೀವ ಶೆಟ್ಟಿ (55) ಹಾಗೂ ಸುಧೀರ ದೇವಾಡಿಗ (35) ಎಂದು ಗುರುತಿಸಲಾಗಿದೆ.

ಕಂಡ್ಲೂರು ಕಡೆಯಿಂದ ಕುಂದಾಪುರ ಕಡೆಗೆ ತೆರಳುತ್ತಿದ್ದ ಕಾರು ಹಾಗೂ ಬಸ್ರೂರು ಸಮೀಪದ ಬಿ.ಎಚ್.ನಿಂದ ಕಂಡ್ಲೂರಿನತ್ತ ತೆರಳುತ್ತಿದ್ದ ಸ್ಕೂಟಿ ಮುಖಾಮುಖಿ ಡಿಕ್ಕಿಯಾಗಿದ್ದು ಪರಿಣಾಮ ದ್ವಿಚಕ್ರ ವಾಹನದಲ್ಲಿದ್ದ ಸವಾರರಿಬ್ಬರು ದೂರಕ್ಕೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಬಗ್ಗೆ ಕುಂದಾಪುರ ಟ್ರಾಫಿಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments are closed.