Accident: ಉಡುಪಿ: ಶಾಲಾ ವಾಹನಕ್ಕೆ ಡಿಕ್ಕಿ ಹೊಡೆದ ಇಕೋ ಕಾರ್!

Accident: ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಕುಂತಲ್ ನಗರದ ಸಮೀಪ ಶಾಲಾ ವಾಹನವೊಂದಕ್ಕೆ ಇಕೋ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಮಾ.29 ರಂದು ಶನಿವಾರ ಬೆಳಿಗ್ಗೆ ಸಂಭವಿಸಿದೆ.
ಶಾಲಾ ಮಕ್ಕಳ ವಾಹನ ಮಣಿಪುರ ಕಡೆಗೆ ಬರುತ್ತಿದ್ದ ಸಂದರ್ಭ ಹಿಂದಿನಿಂದ ಬಂದ ಇಕೋ ಕಾರು ಶಾಲಾ ವಾಹನಕ್ಕೆ ಡಿಕ್ಕಿ (Accident) ಹೊಡೆದಿದೆ ಎನ್ನಲಾಗಿದೆ. ಅಪಘಾತದ ಪರಿಣಾಮ ಇಕೋ ಕಾರ್ ನಲ್ಲಿದ್ದ ತಂದೆ ಮಗ ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣ ಗಾಯಾಳುಗಳನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
Comments are closed.