Kodagu: ರಾಷ್ಟ್ರೀಯ ಹೆದ್ದಾರಿ ಅಂಗಡಿಗೆ ನುಗ್ಗಿದ ಕಾರು! ಅಪಾಯದಿಂದ ಪಾರು!

Kodagu: ಸುಂಟಿಕೊಪ್ಪ ಸಮೀಪದ ಕೊಡಗರಹಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು, ರಸ್ತೆ ಬದಿಯಲ್ಲಿರುವ ಅಂಗಡಿಗೆ ಅಪ್ಪಳಿಸಿರುವ ಘಟನೆ ಇಂದು ಮುಂಜಾನೆ 4 ಗಂಟೆಗೆ ನಡೆದಿದೆ.
ಕಾರು ಕುಶಾಲನಗರ ಕಡೆಯಿಂದ ಬರುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಕೊಡಗರಹಳ್ಳಿ ಗ್ರಾಮ ಪಂಚಾಯಿತಿಗೆ ಸೇರಿದ ಈ ಅಂಗಡಿಯ ಕಟ್ಟಡವು ಕಾರು ಅಪ್ಪಳಿಸಿದ ರಭಸಕ್ಕೆ ಹಾನಿಗೊಳಗಾಗಿದ್ದು, ಕಾರಿನಲ್ಲಿದ್ದವರು ಸಣ್ಣಪುಟ್ಟ ಗಾಯಕ್ಕೊಳಗಾಗಿ ಅಪಾಯದಿಂದ ಪಾರಾಗಿದ್ದಾರೆ.
Comments are closed.