BSNL ಬಳಕೆದಾರರಿಗೆ ಭರ್ಜರಿ ಸಿಹಿ ಸುದ್ದಿ!!

BSNL: ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ ಅಂದರೆ ಬಿಎಸ್‌ಎನ್‌ಎಲ್ (BSNL) ತನ್ನ ಗ್ರಾಹಕರಿಗೆ ಭರ್ಜರಿ ಸಿಹಿ ಸುದ್ದಿ ಒಂದನ್ನು ನೀಡಿದೆ.
ಹೌದು, ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಮಾಹಿತಿ ನೀಡಿದ್ದು, ದೇಶಾದ್ಯಂತ 1 ಲಕ್ಷ ಸ್ಥಳೀಯ 4G ಮೊಬೈಲ್ ಟವರ್‌ಗಳನ್ನು ಸ್ಥಾಪಿಸುತ್ತಿದ್ದು, ಇವುಗಳನ್ನು 5G ಆಗಿ ಪರಿವರ್ತಿಸಲಾಗುವುದು. ಈ ಕೆಲಸ ಜೂನ್ ವೇಳೆಗೆ ಪೂರ್ಣಗೊಳ್ಳುವ ನಿರೀಕ್ಷೆ ಇದೆ. ಇದನ್ನು ಸ್ವಾವಲಂಬಿ ಭಾರತ ಯೋಜನೆಯಡಿಯಲ್ಲಿ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.
ಅಲ್ಲದೆ 18 ವರ್ಷಗಳ ನಂತರ ಬಿಎಸ್‌ಎನ್‌ಎಲ್ ಲಾಭದಾಯಕವಾಗಿದೆ ಮತ್ತು ಸರ್ಕಾರವು 6 ಜಿ ತಂತ್ರಜ್ಞಾನದೊಂದಿಗೆ ಮುಂದುವರಿಯಲು ಯೋಜಿಸುತ್ತಿದೆ ಎಂದೂ ಅವರು ಹೇಳಿದರು.
Comments are closed.