Kalladka Prabhakar Bhat: ನಾಮ ಹಾಕಿದ ಮಾತ್ರಕ್ಕೆ ಹಿಂದೂ ಆಗಲ್ಲ – ಯತ್ನಾಳ್ ವಿರುದ್ಧ ಕಲ್ಲಡ್ಕ ಪ್ರಭಾಕರ್ ಭಟ್ ಕಿಡಿ

Kalladka Prabhakar Bhat: ಬಿಜೆಪಿ ನಾಯಕ, ಹಿಂದೂ ಫೈಯರ್ ಬ್ರಾಂಡ್ ಬಸವನಗೌಡ ಪಾಟೀಲ್ ಅವರು ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಛಾಟನೆಗೊಂಡಿದ್ದಾರೆ. ಇದೀಗ ಅವರು ವಿಜಯದಶಮಿ ಹೊತ್ತಿಗೆ ಹಿಂದೂ ಪಕ್ಷವನ್ನು ಸ್ಥಾಪಿಸುವುದಾಗಿ ಹೇಳಿಕೆ ನೀಡಿದ್ದಾರೆ. ಈ ಬೆನ್ನಲ್ಲೇ ಆರ್ ಎಸ್ ಎಸ್ ಮುಖಂಡ ಕಲಡ್ಕ ಪ್ರಭಾಕರ್ ಭಟ್ಟವರು ಯತ್ನಾಳ್ ವಿರುದ್ಧ ಕಿಡಿ ನಾಮ ಹಾಕಿಕೊಂಡ ಮಾತ್ರಕ್ಕೆ ಹಿಂದೂ ಆಗಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಬಿಜೆಪಿಯಿಂದ ಯತ್ನಾಳ್ ಉಚ್ಚಾಟನೆಯನ್ನು ಸಮರ್ಥಿಸಿಕೊಂಡು ಮಾತನಾಡಿದ ಪ್ರಭಾಕರ ಭಟ್ರು ‘ಹಿಂದುತ್ವವಾದಿ ಎಂದು ಏನು ಬೇಕಾದರೂ ಮಾತನಾಡುವುದಲ್ಲ. ಮಾತನಾಡುವಾಗ ಪ್ರಜ್ಞೆ ಇರಬೇಕು. ಮಾತಿನ ಮೇಲೆ ನಿಗಾವಹಿಸಬೇಕು.
ಒಂದು ಸಂಘಟನೆಯಲ್ಲಿದ್ದಾಗ ಮಾತು ಗಡಿ ಮೀರಿ ಹೋಗಬಾರದು. ಪಕ್ಷದ ಸಮಿತಿ ಒಳಗೆ ಮಾತನಾಡಬೇಕು. ಬೀದಿಯಲ್ಲಿ ಮಾತನಾಡುವುದು ಹಿಂದುತ್ವದ ಲಕ್ಷಣ ಅಲ್ಲ. ಹಿಂದುತ್ವದಲ್ಲಿ ಶಿಸ್ತು ಇದೆ. ಅದು ಇಲ್ಲದಿದ್ದರೆ ಹಿಂದುತ್ವವಾದಿ ಆಗಲು ಸಾಧ್ಯವಿಲ್ಲ. ಪಕ್ಷದಲ್ಲಿ ಶಿಸ್ತಿನಿಂದ ಇರದಿದ್ದರೆ ಇಂತಹ ಸಮಸ್ಯೆ ಆಗುತ್ತವೆ ಎಂದು ಮಾತಿನಲ್ಲೇ ತಿವಿದರು.
Comments are closed.