of your HTML document.

PM Modi: ಪ್ರಧಾನಿಯಾದ ಬಳಿಕ ಮೊದಲ ಬಾರಿ RSS ಕೇಂದ್ರ ಕಚೇರಿಗೆ ಮೋದಿ ಭೇಟಿ!!

PM Modi: ಪ್ರಧಾನಿಯಾದ ಬಳಿಕ ನರೇಂದ್ರ ಮೋದಿಯವರು ಇದೇ ಮೊದಲ ಬಾರಿಗೆ ನಾಗಪುರದ ಆರ್ ಎಸ್ ಎಸ್ ಕೇಂದ್ರ ಕಚೇರಿಗೆ ಭೇಟಿ ಭೇಟಿ ನೀಡಿದ್ದಾರೆ.

ಗುಡಿ ಪಾಡ್ವಾ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನಾಗ್ಪುರದ ಸ್ಮೃತಿ ಮಂದಿರವನ್ನು ತಲುಪಿ ಆರ್‌ಎಸ್‌ಎಸ್ ಸಂಸ್ಥಾಪಕ ಡಾ. ಕೆ.ಬಿ. ಹೆಡ್ಗೇವಾರ್ ಅವರಿಗೆ ಗೌರವ ಸಲ್ಲಿಸಿದರು. ಈ ಸಂದರ್ಭದಲ್ಲಿ RSS ಸರಸಂಘ ಚಾಲಕ ಮೋಹನ್ ಭಾಗವತ್ ಪ್ರಧಾನಿ ಅವರಿಗೆ ಸಾತ್ ನೀಡಿದರು.

ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ನಾಗ್ಪುರದಲ್ಲಿ ಪ್ರಧಾನಿ ಮೋದಿಯವರನ್ನು ಸ್ವಾಗತಿಸಿದರು. ಪ್ರಧಾನಿ ಮೋದಿ ಅವರು ಆರ್‌ಎಸ್‌ಎಸ್ ಪ್ರಧಾನ ಕಚೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಇಬ್ಬರೂ ನಾಯಕರು ಅವರೊಂದಿಗೆ ಇದ್ದರು.

Comments are closed.