of your HTML document.

Yatnal: ವಿಜಯದಶಮಿಗೆ ರಾಜ್ಯದಲ್ಲಿ ಹೊಸ ಪಕ್ಷ ಸ್ಥಾಪನೆ – ಯತ್ನಾಳ್ ಘೋಷಣೆ

Yatnal: ಬಿಜೆಪಿ ನಾಯಕ, ಹಿಂದೂ ಫೈಯರ್ ಬ್ರಾಂಡ್ ಬಸವನಗೌಡ ಪಾಟೀಲ್ ಅವರು ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಛಾಟನೆಗೊಂಡಿದ್ದಾರೆ. ಇದನ್ನಲೇ ರಾಜ್ಯ ರಾಜಕೀಯದಲ್ಲಿ ಹಲವು ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ಬಿಜೆಪಿಯ ರೆಬಲ್ಸ್ ನಾಯಕರು ಸಭೆ ಸೇರಿ ಯತ್ನಾಳ್ ಗೆ ಬೆಂಬಲ ನೀಡಿದ್ದಾರೆ. ಈ ಬೆನ್ನಲ್ಲೇ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಯತ್ನಾಳ್ ಅವರು ಹೊಸ ಪಕ್ಷ ಸ್ಥಾಪನೆ ಬಗ್ಗೆ ಮಾತನಾಡಿದ್ದಾರೆ.

ವಿಜಯಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಹಿಂದೂ ಪಕ್ಷವನ್ನು ಕಟ್ಟುವ ಅನಿವಾರ್ಯತೆ ಇದೆ. ಇದರಿಂದ ರಾಜ್ಯಾದ್ಯಂತ ನಮ್ಮ ಹೋರಾಟ ಆರಂಭವಾಗಿದೆ. ಕುಟುಂಬ ರಾಜಕಾರಣ ಮತ್ತು ಭ್ರಷ್ಟಾಚಾರ ವಿರುದ್ಧ ಹೋರಾಟ ಮಾಡುತ್ತೇನೆ. ಅಕಸ್ಮಾತ್ ಯಡಿಯೂರಪ್ಪ ವಿಜಯೇಂದ್ರನೆ ಪಕ್ಷಕ್ಕೆ ಅನಿವಾರ್ಯವಾದರೆ, ವಿಜಯೇಂದ್ರನನ್ನು ಅಧ್ಯಕ್ಷರಾಗಿ ಮುಂದುವರಿಸಿದರೆ ಅದು ಪಕ್ಷದ ಕರ್ಮ. ನಾವು ಹಿಂದೂ ಪರವಾಗಿ ಪಕ್ಷ ಕಟ್ಟಬೇಕಾದ ಅನಿವಾರ್ಯತೆ ಬರಲಿದೆ. ಮುಂದಿನ ವಿಜಯದಶಮಿಗೆ ರಾಜ್ಯದಲ್ಲಿ ಹೊಸ ಪಕ್ಷ ರಚನೆ ಮಾಡಲಾಗುತ್ತೆ ಎಂದು ಹೇಳಿದರು.

Comments are closed.