Government: ನರೇಗಾ ಕೂಲಿ ಮೊತ್ತ 349 ರಿಂದ 370 ಕ್ಕೆ ಹೆಚ್ಚಳ!

Government: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ 2025 ಏಪ್ರಿಲ್ 01 ರಿಂದ ದಿನದ ಕೂಲಿ ಮೊತ್ತವನ್ನು ರೂ. 349 ರಿಂದ 370ಕ್ಕೆ ಹೆಚ್ಚಳ ಮಾಡಿ ಕೇಂದ್ರ ಸರ್ಕಾರ (Government) ಆದೇಶ ಹೊರಡಿಸಿದೆ.
ಜಿಲ್ಲೆಯಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆ ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗುತ್ತಿದ್ದು, ಇನ್ನು ಮುಂದೆ ನರೇಗಾ ಕೂಲಿಗಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಇದರ ಪ್ರಯೋಜನ ಪಡೆದುಕೊಳ್ಳುವಂತೆ ತಿಳಿಸಲಾಗಿದೆ.
ನರೇಗಾ ಯೋಜನೆಯಲ್ಲಿ ಹೆಣ್ಣು ಮತ್ತು ಗಂಡಿಗೆ ಸಮಾನ ಕೂಲಿ ಅಂದರೆ ಒಂದು ದಿನದ ಕೂಲಿಗೆ ರೂ. 370 ಪಡೆಯುವ ಹಕ್ಕಿದ್ದು ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಇದರ ಪ್ರಯೋಜನ ಪಡೆದುಕೊಳ್ಳುವಂತೆ ತಿಳಿಸಲಾಗಿದೆ.
ಒಂದು ಆರ್ಥಿಕ ವರ್ಷದಲ್ಲಿ ಒಂದು ಕುಟುಂಬಕ್ಕೆ ಕನಿಷ್ಠ 100 ದಿನಗಳ ಕೂಲಿ ದೊರೆಯುವಂತೆ ಮಾಡುವುದು ಹಾಗೂ 65 ವರ್ಷ ಮೇಲ್ಪಟ್ಟ ವೃದ್ಧರಿಗೆ ಮತ್ತು ವಿಶೇಷಚೇತನರಿಗೆ ಕೆಲಸದಲ್ಲಿ ಶೇ.50 ವಿನಾಯಿತಿ ನೀಡಲಾಗಿದೆ.
Comments are closed.