ಮಾ.31 ರಂದು ಸಮರವೀರ ಕೆದಂಬಾಡಿ ರಾಮಯ್ಯ ಗೌಡ್ರ ನೆಂಪುನ ಜಂಬರ

Share the Article

Sullia: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಸಮರವೀರ ಕೆದಂಬಾಡಿ ರಾಮಯ್ಯ ಗೌಡ್ರ ನೆಂಪುನ ಜಂಬರ ಕಾರ್ಯಕ್ರಮವು ಮಾರ್ಚ್, 31 ರಂದು ಬೆಳಗ್ಗೆ 9 ಗಂಟೆಗೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಉಬರಡ್ಕ ಮಿತ್ತೂರು ಅಮೈಮಡಿಯಾರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ.

ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ, ಮಿತ್ತೂರು ಉಳ್ಳಾಕುಲು ನಾಯರ್ ದೈವಸ್ಥಾನದ ಆಡಳಿತ ಮುಖ್ಯಸ್ಥರಾದ ವೆಂಕಟ್ರಮಣ ಗೌಡ ಕೆದಂಬಾಡಿ, ಇತಿಹಾಸ ವಿಶ್ಲೇಷಕರಾದ ಅರವಿಂದ ಚೊಕ್ಕಾಡಿ, ಉಬರಡ್ಕ ಮಿತ್ತೂರು ಗ್ರಾ.ಪಂ.ಅಧ್ಯಕ್ಷರಾದ ಪೂರ್ಣಿಮಾ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷರಾದ ಲಕ್ಷ್ಮೀನಾರಾಯಣ ಕಜೆಗದ್ದೆ, ಸುಳ್ಯ ಗೌಡರ ಯುವ ಸೇವಾ ಸಂಘದ ಅಧ್ಯಕ್ಷರಾದ ಪಿ.ಎಸ್.ಗಂಗಾಧರ, ಉಬರಡ್ಕ ಮಿತ್ತೂರು ಜ್ಞಾನಧಾಮ ಚಾರಿಟೇಬಲ್ ಟ್ರಸ್ಟ್ ಸಂಚಾಲಕರಾದ ದಾಮೋದರ ಮದುವೆಗದ್ದೆ, ಉಬರಡ್ಕ ಮಿತ್ತೂರು ಗ್ರಾ.ಪಂ.ಉಪಾಧ್ಯಕ್ಷರಾದ ಚಿತ್ರಾ ಪಾಲಡ್ಕ, ಮಂಗಳೂರು ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಸ್ಥಾಪನಾ ಸಮಿತಿ ಅಧ್ಯಕ್ಷರಾದ ಕಿರಣ್ ಬುಡ್ಲೆಗುತ್ತು, ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯರಾದ ಎಂ.ಎಚ್.ಸುರೇಶ್, ಅಮೈಮಡಿಯಾರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷರಾದ ಲೋಕೇಶ್ ಕೊಟ್ಯಾನ್, ಅಮೈಮಡಿಯಾರು ವಿನಾಯಕ ಮಿತ್ರ ಬಳಗದ ಅಧ್ಯಕ್ಷರಾದ ವಿದ್ಯಾಧರ ಹರ್ಲಡ್ಕ, ಸದಸ್ಯರು ಇತರರು ಪಾಲ್ಗೊಳ್ಳಲಿದ್ದಾರೆ.

Comments are closed.