of your HTML document.

Udupi: ಕರ್ತವ್ಯ ಲೋಪ: ಕುಂದಾಪುರ ಉಪವಿಭಾಗಾಧಿಕಾರಿ ಮಹೇಶ್ ಚಂದ್ರ ಸಸ್ಪೆಂಡ್!

Udupi: ಕುಂದಾಪುರ ಉಪವಿಭಾಗಾಧಿಕಾರಿ, ಕೆ ಎ ಎಸ್ ಅಧಿಕಾರಿ ಶ್ರೀ ಮಹೇಶ್ ಚಂದ್ರ ಅವರನ್ನು ಇಲಾಖಾ ವಿಚಾರಣೆಯನ್ನು ಬಾಕಿ ಇರಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

ಉಪವಿಭಾಗಾಧಿಕಾರಿಯವರ ಕರ್ತವ್ಯ ಲೋಪದ ಬಗ್ಗೆ ಮಾನ್ಯ ಜಿಲ್ಲಾಧಿಕಾರಿಗಳು ಉಡುಪಿ ಜಿಲ್ಲೆ ಇವರು ಸರ್ಕಾರಕ್ಕೆ ವಿಸ್ತೃತ ವರದಿ ಸಲ್ಲಿಸಿದ್ದು , ಡಿಸಿಯವರ ವರದಿ ಆಧಾರದ ಮೇಲೆ ಸರ್ಕಾರದ ಅಧೀನ ಕಾರ್ಯದರ್ಶಿ ಈ ಆದೇಶ ಹೊರಡಿಸಿದ್ದಾರೆ.

ಮುಂದಿನ ಆದೇಶದವರೆಗೆ ಕುಂದಾಪುರ ಉಪವಿಭಾಗ ಹುದ್ದೆಯ ಪ್ರಭಾರವನ್ನು ಬ್ರಹ್ಮಾವರ ತಹಶೀಲ್ದಾರ್ ಶ್ರೀ ಶ್ರೀಕಾಂತ್ ಹೆಗ್ಡೆ ಅವರಿಗೆ ನಿರ್ವಹಿಸುವಂತೆ ಆದೇಶಿಸಲಾಗಿದೆ.

Comments are closed.