of your HTML document.

Anjanadri: ಅಂಜನಾದ್ರಿ ರೋಪ್ ವೇ ನಿರ್ಮಾಣಕ್ಕೆ ಸರ್ಕಾರದ ಗ್ರೀನ್ ಸಿಗ್ನಲ್!!

Anjanadri: ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿರುವ ಅಂಜನಾದ್ರಿ ಹನುಮ ಭೂಮಿ ಎಂದೇ ಪ್ರಸಿದ್ಧಿ ಪಡೆದಿದೆ. ರಾಮಾಯಣದ ಉಲ್ಲೇಖಗಳ ಪ್ರಕಾರ ಅಂಜನಾದ್ರಿಯೆ ಹನುಮನ ಜನ್ಮಭೂಮಿ ಎಂಬುದು ಸಾಭೀತಾಗಿದೆ. ಇದೀಗ ಹನುಮನ ಭಕ್ತಾ ಅಭಿಮಾನಿಗಳಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದ್ದು ಅಂಜನಾದ್ರಿ ಗೆ ರೋಪ್ ವೇ ನಿರ್ಮಿಸಲು ಗ್ರೀನ್ ಸಿಗ್ನಲ್ ನೀಡಿದೆ.

ಹೌದು, ಅಂಜನಾದ್ರಿಗೆ ಬರುವ ಭಕ್ತಾಭಿಮಾನಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಬೆಟ್ಟದ ಮೇಲಿರುವ ಆಂಜನೇಯನ ದರ್ಶನ ಪಡೆಯಲು ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ಆದರೆ ಆಂಜನೇಯನ ದರ್ಶನ ಪಡೆಯಬೇಕಾದರೆ, ಬೆಟ್ಟದಲ್ಲಿರುವ 575 ಮೆಟ್ಟಿಲುಗಳನ್ನು ಹತ್ತಲೇಬೇಕು. ಹೀಗಾಗಿ ಬೆಟ್ಟಕ್ಕೆ ರೂಪ್ ವೇ ನಿರ್ಮಿಸುವಂತೆ ಹಲವು ವರ್ಷಗಳಿಂದ ಒತ್ತಾಯಗಳು ಕೇಳಿಬರುತ್ತಿವೆ. ಕೊನೆಗೂ ಇದೀಗ ಸರ್ಕಾರ ಈ ಬೇಡಿಕೆಗೆ ಗ್ರೀನ್ ಸಿಗ್ನಲ್ ನೀಡಿದೆ.

ಈಗ ಅಂದುಕೊಂಡಂತೆ ಆದರೆ ಅಂಜನಾದ್ರಿ ಬೆಟ್ಟಕ್ಕೆ ಮೂರು ರೋಪ್ ವೇ ನಿರ್ಮಾಣದ ಪ್ಲ್ಯಾನ್ ರೆಡಿಯಾಗುತ್ತಿದೆ. ಮೊದಲ ಹಂತದಲ್ಲಿ ಒಂದು ರೋಪ್ ವೇ ನಿರ್ಮಾಣಕ್ಕೆ ಸಿದ್ದತೆ ನಡೆದಿದೆ. ಮೂರು ಕಿಲೋ ಮೀಟರ ರೋಪ್ ವೇಯನ್ನು 120 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಮಂಜೂರಾತಿ ನೀಡಿದೆಯಂತೆ. ಈ ರೋಪ್ ವೇ ನಿರ್ಮಾಣವಾದರೆ ಹಂಪಿ ವಿರುಪಾಕ್ಷೇಶ್ವರ ದೇವಸ್ಥಾನದಿಂದ ನೇರವಾಗಿ ಅಂಜನಾದ್ರಿಗೆ ರೋಪ್ ವೇ ನಿರ್ಮಾಣವಾಗಲಿದೆ. 450 ಮೀ. ಉದ್ದದ ರೋಪ್ ವೇ ನಿರ್ಮಾಣವಾದರೆ ಒಂದು ಗಂಟೆಯಲ್ಲಿ 800 ಭಕ್ತಾಧಿಗಳನ್ನು ಅಂಜನಾದ್ರಿ ಬೆಟ್ಟದ ಮೇಲೆ ತಲುಪಿಸಬಹುದಾಗಿದೆ.

Comments are closed.