of your HTML document.

PM Modi: ಸೆಪ್ಟೆಂಬರ್ ನಲ್ಲಿ ಮೋದಿ ನಿವೃತ್ತಿ ಘೋಷಣೆ- ಉತ್ತರಾಧಿಕಾರಿ ನಿರ್ಧರಿಸಲು RSS ಕಚೇರಿಗೆ ಭೇಟಿ?

PM Modi: ಪ್ರಧಾನಿಯಾದ ಬಳಿಕ ನರೇಂದ್ರ ಮೋದಿಯವರು ಇದೇ ಮೊದಲ ಬಾರಿಗೆ ನಾಗಪುರದ ಆರ್ ಎಸ್ ಎಸ್ ಕೇಂದ್ರ ಕಚೇರಿಗೆ ಭೇಟಿ ಭೇಟಿ ನೀಡಿದ್ದಾರೆ. ಗುಡಿ ಪಾಡ್ವಾ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನಾಗ್ಪುರದ ಸ್ಮೃತಿ ಮಂದಿರವನ್ನು ತಲುಪಿ ಆರ್‌ಎಸ್‌ಎಸ್ ಸಂಸ್ಥಾಪಕ ಡಾ. ಕೆ.ಬಿ. ಹೆಡ್ಗೇವಾರ್ ಅವರಿಗೆ ಗೌರವ ಸಲ್ಲಿಸಿದ್ದಾರೆ. ಪ್ರಧಾನಿ ಮೋದಿಯವರ ಈ ಭೇಟಿ ಕುರಿತಾಗಿ ಶಿವ ಸೇನೆ ನಾಯಕ ಸಂಜಯ್ ರಾವತ್ ಅವರು ಸ್ಪೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ.

ಹೌದು, ಸೆಪ್ಟೆಂಬರ್ ನಲ್ಲಿ ಪ್ರಧಾನಿ ಮೋದಿಯವರು ನಿವೃತ್ತಿಯನ್ನು ಘೋಷಿಸಲಿದ್ದಾರೆ ಈ ಹಿನ್ನೆಲೆಯಲ್ಲಿ ಅವರು ಆರ್ ಎಸ್ ಎಸ್ ಕಚೇರಿಗೆ ಭೇಟಿ ನೀಡಿದ್ದಾರೆ ಎಂದು ಸಂಜಯ್ ರಾವತ್ ಹೇಳಿರುವುದು ಇದೀಗ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ.

ಮೋದಿ ಕಳೆದ 10-11 ವರ್ಷಗಳಲ್ಲಿ ಆರ್‌ಎಸ್‌ಎಸ್ ಪ್ರಧಾನ ಕಚೇರಿಗೆ ಭೇಟಿ ನೀಡಿಲ್ಲ. ಆದರೆ ಈಗ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ‘ಟಾಟಾ, ಬೈ, ಬೈ’ ಹೇಳಲು ಹಾಗೆ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಉತ್ತರಾಧಿಕಾರಿಯನ್ನು ಆರ್‌ಎಸ್‌ಎಸ್ ನಿರ್ಧರಿಸುತ್ತದೆ ಎಂದು ಸಂಜಯ್ ರಾವತ್ ಹೇಳಿಕೊಂಡಿದ್ದಾರೆ,

ಅಲ್ಲದೆ ‘ನಾನು ಅರ್ಥಮಾಡಿಕೊಂಡಂತೆ ಇಡೀ ಸಂಘ ಪರಿವಾರವು ದೇಶದ ನಾಯಕತ್ವದಲ್ಲಿ ಬದಲಾವಣೆಯನ್ನು ಬಯಸುತ್ತದೆ. ಪ್ರಧಾನಿ ಮೋದಿಯವರ ಸಮಯ ಮುಗಿದಿದೆ. ಆರ್ ಎಸ್ ಎಸ್ ನವರು ಬದಲಾವಣೆ ಬಯಸುತ್ತಾರೆ. ಅವರು ಮುಂದಿನ ಬಿಜೆಪಿ ಮುಖ್ಯಸ್ಥರನ್ನು ಆಯ್ಕೆ ಮಾಡಲು ಬಯಸುತ್ತಾರೆ’ ಎಂದು ಮುಂಬೈನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ರಾವತ್ ಹೇಳಿದರು.

Comments are closed.