DPAR: ಒಳ ಮೀಸಲಾತಿ ಜಾರಿಯಾಗೋ ವರೆಗೂ ಯಾವ ನೇಮಕಾತಿ ಇಲ್ಲ – ಸರ್ಕಾರದಿಂದ ಮಹತ್ವದ ನಿರ್ಧಾರ

DPAR: ಒಳ ಮೀಸಲಾತಿ ಜಾರಿ ಆಗುವವರೆಗೂ ಸರ್ಕಾರದ ಯಾವುದೇ ಹುದ್ದೆಗಳಿಗೆ ಹೊಸ ನೇಮಕಾತಿ ಮಾಡಿಕೊಳ್ಳುವುದಾಗಲಿ ಅಥವಾ ನೇಮಕಾತಿಗೆ ಅಧಿಸೂಚನೆ ಹೊರಡಿಸುವುದಾಗಲಿ ಮಾಡುವಂತಿಲ್ಲ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಅಧಿಕಾರಿಗಳಿಗೆ ಸುತ್ತೋಲೆ ಹೊರಡಿಸಿದ್ದಾರೆ.
ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಜಾರಿಗೆ ಬರುವವರೆಗೆ ಯಾವುದೇ ಹೊಸ ನೇಮಕಾತಿ ನಡೆಸದಿರಲು ರಾಜ್ಯ ಸಚಿವ ಸಂಪುಟ ನಿರ್ಣಯ ತೆಗೆದುಕೊಂಡಿತ್ತು. ಇದರ ಆಧಾರದ ಮೇಲೆ 2024 ನ. 25ರಂದು ಡಿಎಪಿಆರ್ ಸುತ್ತೋಲೆ ಹೊರಡಿಸಿತ್ತು. ರಾಜ್ಯ ನಾಗರಿಕ ಸೇವೆಗಳ ಹುದ್ದೆಗಳಿಗೆ ನೇಮಕಾತಿ ಸಂಬಂಧಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಯಾವುದೇ ಅಧಿಸೂಚನೆ ಹೊರಡಿಸಬಾರದು ಎಂದು ತಾಕೀತು ಮಾಡಿತ್ತು.
2024ರ ನ. 25ರಂದು ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದ್ದರೂ ಕೆಲ ನೇಮಕಾತಿ ಪ್ರಾಧಿಕಾರಗಳು ಸರ್ಕಾರದ ಆದೇಶ ಉಲ್ಲಂಘಿಸಿ ಹೊಸ ಅಧಿಸೂಚನೆ ಹೊರಡಿಸಿದ್ದವು. ಈ ಕುರಿತಾಗಿ ಕೆಲವು ಮುಖಂಡರು ಮುಖ್ಯ ಕಾರ್ಯದರ್ಶಿಯನ್ನು ಭೇಟಿ ಮಾಡಿ ದೂರನ್ನು ನೀಡಿದ್ದರು. ಈ ಹಿನ್ನಲೆಯಲ್ಲಿ ಡಿಪಿಎಆರ್ ಮತ್ತೊಮ್ಮೆ ಸುತ್ತೋಲೆ ಹೊರಡಿಸಿದೆ.
Comments are closed.