Mangaluru: ರಾಷ್ಟ್ರೀಯ ಹೆದ್ದಾರಿ 66ರ ಹಳೆಯ ನೇತ್ರಾವತಿ ಸೇತುವೆಯಲ್ಲಿ ದುರಸ್ತಿ ಕಾರ್ಯ: ಏಪ್ರಿಲ್ 30 ರವರೆಗೆ ಬದಲಿ ಮಾರ್ಗ ವ್ಯವಸ್ಥೆ

Mangaluru: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ಮಂಗಳೂರು (Mangaluru) ನಗರದಿಂದ ಕೇರಳ ರಾಜ್ಯಕ್ಕೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 66ರ ಹಳೆಯ ನೇತ್ರಾವತಿ ಸೇತುವೆಯಲ್ಲಿ ಏಪ್ರಿಲ್ 1ರಿಂದ 30ರವರೆಗೆ ದುರಸ್ತಿ ಕಾಮಗಾರಿ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ವಾಹನಗಳ ಸಂಚಾರಕ್ಕಾಗಿ ದ್ವಿಮುಖ ಸಂಚಾರ ವ್ಯವಸ್ಥೆ ಮಾಡಲಾಗಿದೆ.
ಬದಲಿ ಮಾರ್ಗ ವ್ಯವಸ್ಥೆ:
• ಮುಡಿಪು-ಕೊಣಾಜೆ ದೇರಳಕಟ್ಟೆ ಕಡೆಯಿಂದ ಮಂಗಳೂರು ನಗರ ಕಡೆಗೆ ಸಂಚರಿಸುವ ಸ್ಥಳೀಯ ಲಘು ವಾಹನಗಳು, ದ್ವಿಚಕ್ರ ವಾಹನಗಳು ಕೊಣಾಜೆ- ಹರೇಕಳ (ಬ್ರಿಡ್ಜ್) ಅಡ್ಯಾರ್ ಮುಖಾಂತರ ಮಂಗಳೂರು ಕಡೆಗೆ ಸಂಚರಿಸಬಹುದಾಗಿದೆ.
• ಮಂಗಳೂರು ಕಡೆಯಿಂದ ಕೊಣಾಜೆ-ಮುಡಿಪು ದೇರಳಕಟ್ಟೆ ಕಡೆಗೆ ಸಂಚರಿಸುವ ಸ್ಥಳೀಯ ದ್ವಿಚಕ್ರ/ ಲಘು ವಾಹನಗಳು ಅಡ್ಯಾರ್ ಹರೇಕಳ (ಬ್ರಿಡ್ಜ್) ಮುಖಾಂತರ ಸಂಚರಿಸಬಹುದು.
• ತಲಪಾಡಿ, ಉಳ್ಳಾಲ ಕಡೆಯಿಂದ ಬೆಂಗಳೂರು – ಉಪ್ಪಿನಂಗಡಿ – ಪುತ್ತೂರು – ಸುಳ್ಯ ಕಡೆಗೆ ಸಂಚರಿಸುವ ವಾಹನಗಳು ತೊಕ್ಕೊಟ್ಟಿನಿಂದ ಬಲಕ್ಕೆ ತಿರುಗಿ ಮುಡಿಪು – ಬೋಳಿಯಾರ್ – ಮೆಲ್ಕರ್ ಮೂಲಕ ಸಂಚರಿಸಬಹುದು.
• ಬಿಸಿ ರೋಡ್ ಕಡೆಯಿಂದ ತಲಪಾಡಿ ಮತ್ತು ಕೇರಳ ಕಡೆಗೆ ಸಂಚರಿಸುವ ವಾಹನಗಳು ಮೆಲ್ಕಾರ್-ಮುಡಿಪು-ತೊಕ್ಕೊಟ್ಟು ಮುಖಾಂತರ ಸಂಚರಿಸಬಹುದು ಎಂದು ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.
Comments are closed.