Murder Case: ಎಪ್ರಿಲ್ 2ರಂದು ದರ್ಶನ್ ಭವಿಷ್ಯ ನಿರ್ಧಾರ! ಸಿಟಿ ಸಿವಿಲ್ ಕೋರ್ಟ್ನಲ್ಲಿ ವಿಚಾರಣೆ

Murder Case: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣಕ್ಕೆ(Renukaswami Murder Case) ಸಂಬಂಧಪಟ್ಟಂತೆ ದರ್ಶನ್(Actor Darshan), ಬಿಡುಗಡೆ ಆದ ಮೇಲೆ ಇನ್ನೇನು ಸಮಸ್ಯೆಗಳು ಪರಿಹಾರವಾಯ್ತು ಎಂದು ನಿಟ್ಟುಸಿರು ಬಿಟ್ಟಿದ್ದರು. ಆದರೆ ಪೂರ್ತಿಯಾಗಿ ಅದನ್ನು ನಂಬಿ ಕೂರುವಂಗೂ ಇಲ್ಲ. ಈಗಾಗಲೇ ಈ ಪ್ರಕರಣ ಸಂಬಂಧ ಎಲ್ಲಾ 17 ಆರೋಪಿಗಳು ಜಾಮೀನಿನ ಮೇಲೆ ಹೊರಬಂದಿದ್ದು ಸದ್ಯ ಸಿಟಿ ಸಿವಿಲ್ ಕೋರ್ಟ್(City Civil Court) ನಲ್ಲಿ ವಿಚಾರಣೆ ನಡೆಯುತ್ತಿದೆ.
ಆದ್ರೆ ಈ ಮಧ್ಯೆ ನಟ ದರ್ಶನ್ ಸೇರಿದಂತೆ ಪ್ರಕರಣದ 7 ಆರೋಪಿಗಳಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿರುವುದನ್ನು ಪ್ರಶ್ನಿಸಿ ಪೊಲೀಸರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. A2 ದರ್ಶನ್ ಸೇರಿದಂತೆ ಒಟ್ಟು 7 ಆರೋಪಿಗಳ ಜಾಮೀನು ವಜಾ ಮಾಡಬೇಕು ಎಂದು ಪೊಲೀಸರು ಅರ್ಜಿ ಸಲ್ಲಿಸಿದ್ದಾರೆ.
ಹೀಗಾಗಿ ಎಂಪ್ರಿಲ್ ೨ರಂದು ಸುಪ್ರೀಂ ಕೋರ್ಟ್ ನಲ್ಲಿ ಈ ಅರ್ಜಿಯ ವಿಚಾರಣೆ ನಡೆಯಲಿದ್ದು, ಈ ಏಳು ಮಂದಿ ಆರೋಪಿಗಳ ಜಾಮೀನಿನ ಭವಿಷ್ಯ ನಿರ್ಧಾರವಾಗಲಿದೆ. ಒಂದುವೇಳೆ ಈ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಜಾಮೀನು ಅರ್ಜಿಯನ್ನು ವಜಾಗೊಳಿಸಿದಲ್ಲಿ ನಟ ದರ್ಶನ್ ಸೇರಿದಂತೆ ಒಟ್ಟು ಏಳು ಆರೋಪಿಗಳಿಗೆ ಸಂಕಷ್ಟ ಎದುರಾಗಲಿದೆ.
Comments are closed.