Fire Accident: ಗುಜರಾತ್‌ನ ಕಾರ್ಖಾನೆಯಲ್ಲಿ ಬೆಂಕಿ ಅವಘಡ: ಮೃತರ ಸಂಖ್ಯೆ 18ಕ್ಕೆ ಏರಿಕೆ

Fire Accident: ಗುಜರಾತ್‌ನ(Gujarat) ಬನಾಸಕಾಂತ ಜಿಲ್ಲೆಯ ಕಾರ್ಖಾನೆಯೊಂದರಲ್ಲಿ ಮಂಗಳವಾರ ಬಾಯರ್ ಸ್ಪೋಟದಿಂದ ಉಂಟಾದ ಬೆಂಕಿಯಲ್ಲಿ ಮೃತಪಟ್ಟವರ ಸಂಖ್ಯೆ 18ಕ್ಕೆ ಏರಿದೆ. ಪ್ರಾಥಮಿಕ ವರದಿಗಳ ಪ್ರಕಾರ, ಮೃತಪಟ್ಟ ಎಲ್ಲಾ ಕಾರ್ಮಿಕರು ಮಧ್ಯಪ್ರದೇಶದಿಂದ(MP) ವಲಸೆ ಬಂದವರಾಗಿದ್ದಾರೆ. ಅವರು ಬೆಂಕಿ ಅವಘಡ ನಡೆಯುವ ಎರಡು ದಿನಗಳ ಮೊದಲು ಕಾರ್ಖಾನೆಗೆ ಆಗಮಿಸಿದ್ದರು. ಘಟನೆಯಲ್ಲಿ ಹಲವಾರು ಜನರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ(Hospital) ದಾಖಲಿಸಲಾಗಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಘಟನೆಯ ಸಮಯದಲ್ಲಿ ಸುಮಾರು 23 ಜನರು ಕೆಲಸ ಮಾಡುತ್ತಿದ್ದರು ಮತ್ತು ಅವರಲ್ಲಿ ಐದು ಜನರು ಗಾಯಗೊಂಡಿದ್ದಾರೆ. ಅವರನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಗಿದೆ” ಎಂದು ಆರೋಗ್ಯ ಸಚಿವ ರುಷಿಕೇಶ್ ಪಟೇಲ್ ಹೇಳಿದರು. ಪಟಾಕಿಗಳನ್ನು ಸಂಗ್ರಹಿಸಿದ್ದ ಗೋಡೌನ್‌ನಲ್ಲಿ ಸ್ಫೋಟ ಸಂಭವಿಸಿದೆ. ಅನೇಕ ಕಾರ್ಮಿಕರು ಕೆಲಸ ಮಾಡುತ್ತಿದ್ದ ಸ್ಥಳದಲ್ಲಿ ಸ್ಲ್ಯಾಬ್ ಬಿದ್ದಿದೆ” ಎಂದು ಬನಸ್ಕಾಂತದ ನಿವಾಸಿ ಸಿಪಿ ಪಟೇಲ್ ಹೇಳಿದರು.
ಅಧಿಕಾರಿಗಳು ಇನ್ನೂ ಪರಿಸ್ಥಿತಿಯ ಸಂಪೂರ್ಣ ಪರಿಣಾಮವನ್ನು ಅವಲೋಕಿಸುತ್ತಿದ್ದಾರೆ. “ದೀಸಾದಲ್ಲಿರುವ ಖುಪ್ಚಂದ್ ಎಂಬ ವ್ಯಕ್ತಿಗೆ ಸೇರಿದ ಪಟಾಕಿ ಕಾರ್ಖಾನೆಯಲ್ಲಿ ಬೆಳಿಗ್ಗೆ 9.30 ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಘಟನೆಯ ಸಮಯದಲ್ಲಿ ಎಷ್ಟು ಕಾರ್ಮಿಕರು ಇದ್ದರು ಮತ್ತು ಎಷ್ಟು ಮಂದಿ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ ಎಂಬುದು ಸ್ಪಷ್ಟವಾಗಿಲ್ಲ” ಎಂದು ದೀಸಾ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Comments are closed.