of your HTML document.

Heat Wave: ಏಪ್ರಿಲ್-ಜೂನ್‌ನಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಬಿಸಿಲಿನ ತಾಪ: ಹವಾಮಾನ ಇಲಾಖೆ ಎಚ್ಚರಿಕೆ

Heat Wave: ಭಾರತವು(India) ಈ ಬೇಸಿಗೆಯಲ್ಲಿ(Summer) ಸಾಮಾನ್ಯಕ್ಕಿಂತ ಹೆಚ್ಚು ಬಿಸಿಲಿನ ತಾಪಮಾನ ಅನುಭವಿಸಬಹುದು ಎಂದು IMD(India Meteorological Department ) ಮುಖ್ಯಸ್ಥ ಮೃತ್ಯುಂಜಯ್ ಮೊಹಾಪಾತ್ರ ಹೇಳಿದ್ದಾರೆ. “ಏಪ್ರಿಲ್‌ನಿಂದ ಜೂನ್‌ವರೆಗೆ, ಉತ್ತರ ಮತ್ತು ಪೂರ್ವ ಭಾರತದ ಹೆಚ್ಚಿನ ಭಾಗಗಳು, ಮಧ್ಯ ಭಾರತ ಮತ್ತು ವಾಯುವ್ಯ ಭಾರತದ ಬಯಲು ಪ್ರದೇಶಗಳು ಸಾಮಾನ್ಯಕ್ಕಿಂತ 2-4ರಷ್ಟು ಹೆಚ್ಚು ಹೀಟ್ ವೇವ್ ದಿನಗಳನ್ನು ಅನುಭವಿಸುವ ನಿರೀಕ್ಷೆಯಿದೆ” ಎಂದು ಅವರು ಹೇಳಿದರು. ವಾಯುವ್ಯ ಭಾರತವು ಎರಡು ಪಟ್ಟು ಹೆಚ್ಚು ತಾಪಮಾನದ ದಿನಗಳನ್ನು ಎದುರಿಸಬಹುದು ಎಂದು IMD ಹೇಳಿದೆ.

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ವಿಪರೀತ ಸೆಖೆಯ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಕನ್ನಡದ ಸುಳ್ಯದ ಸುತ್ತಮುತ್ತ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. ಈಗಿನಂತೆ ಎಪ್ರಿಲ್ 1ರಿಂದ ಉಡುಪಿ, ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗಿನೊಂದಿಗೆ ಸಾಮಾನ್ಯ ಮಳೆ ಆರಂಭವಾಗುವ ಲಕ್ಷಣಗಳಿವೆ. ದಿನಗಳೆದಂತೆ ಮಳೆಯ ಪ್ರಮಾಣ ಹೆಚ್ಚಾಗುವ ನಿರೀಕ್ಷೆ ಇದೆ.

ಮಲೆನಾಡು : ಕೊಡಗು ಜಿಲ್ಲೆಯ ಅಲ್ಲಲ್ಲಿ ಸಂಜೆ, ರಾತ್ರಿ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚೆನೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ಎಪ್ರಿಲ್ 1ರಿಂದ ಮಲೆನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗಿನೊಂದಿಗೆ ಮಳೆ ಆರಂಭವಾಗುವ ಲಕ್ಷಣಗಳಿದ್ದು, ನಂತರದ ದಿನಗಳಲ್ಲಿ ಮಲೆನಾಡಿನ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಗಳಿವೆ.

ಒಳನಾಡು : ಉತ್ತರ ಹಾಗೂ ದಕ್ಷಿಣ ಒಳನಾಡು ಬಹುತೇಕ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ ಇದ್ದು, ಎಪ್ರಿಲ್ 2ರಿಂದ ಉತ್ತರ ಒಳನಾಡಿನ ಅಲ್ಲಲ್ಲಿ ಮಳೆ ಆರಂಭವಾಗುವ ಲಕ್ಷಣಗಳಿವೆ. ಎಪ್ರಿಲ್ 3ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿಯೂ ಮಳೆಯಾಗುವ ಮುನ್ಸೂಚನೆಗಳಿವೆ. ಹಿಂದೂಮಹಾಸಾಗರದಿಂದ ಬಂಗಾಳಕೊಲ್ಲಿಯ ಮೂಲಕ ಹಾಗೂ ಬಂಗಾಳಕೊಲ್ಲಿಯ ಸುಮಾತ್ರ ಕಡೆಯಿಂದಲೂ ಗಾಳಿಯ ಉತ್ತಮ ಬೀಸುವಿಕೆಯಿಂದ ಮುಂಗಾರು ಪೂರ್ವದ ರೀತಿಯ ವಾತಾವರಣ ನಿರ್ಮಾಣವಾಗಿದೆ.

Comments are closed.