2nd PU Result : ದ್ವಿತೀಯ ಪಿಯುಸಿ ಫಲಿತಾಂಶ ಈ ದಿನ ಪ್ರಕಟ!!

2nd PU Result : ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆಯ (2 PU Exam) ಮೌಲ್ಯಮಾಪನ ಪ್ರಕ್ರಿಯೆ ಈ ವಾರ ಮುಕ್ತಾಯಗೊಳ್ಳಲಿದ್ದು, ಸದ್ಯದಲ್ಲೇ ಫಲಿತಾಂಶ ಹೊರಬೀಳಲಿದೆ ಎಂದು ಮೂಲಗಳು ತಿಳಿಸಿದೆ.
ಹೌದು, ಸೆಕೆಂಡ್ ಪಿಯುಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳೆಲ್ಲರೂ ಫಲಿತಾಂಶಕ್ಕಾಗಿ ಎದುರು ನೋಡುತ್ತಿದ್ದಾರೆ. ಏಪ್ರಿಲ್ 11ರ ಒಳಗಾಗಿ ಫಲಿತಾಂಶ ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ (KSEAB) ಮೂಲಗಳು ತಿಳಿಸಿವೆ.
ಅಂದಹಾಗೆ ಕಳೆದ ವರ್ಷ ಸೆಕೆಂಡ್ ಪಿಯು ಫಲಿತಾಂಶವನ್ನು ಏಪ್ರಿಲ್ 10 ರಂದು ಬಿಡುಗಡೆ ಮಾಡಲಾಗಿತ್ತು. ಈ ವರ್ಷವೂ ಸರಿಸುಮಾರು ಅದೇ ಹೊತ್ತಿಗೆ ಫಲಿತಾಂಶ ಪ್ರಕಟವಾಗುವ ನಿರೀಕ್ಷೆ ಇದೆ.
Comments are closed.