Annamalai: ಅಣ್ಣಾಮಲೈ ಕೈ ತಪ್ಪಲಿದೆ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ?

Annamalai: ಮಾಜಿ ಐಪಿಎಸ್ ಆಫೀಸರ್ ಆಗಿರುವ ಅಣ್ಣಮಲೈ ಅವರಿಗೆ ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ಕೈತಪ್ಪುವ ಆತಂಕ ಎದುರಾಗಿದೆ.
ತಮಿಳುನಾಡು ರಾಜ್ಯದಲ್ಲಿ ಹಲವು ರಾಜಕೀಯ ಬೆಳವಣಿಗೆ ನಡೆಯುತ್ತಿದೆ. 2026ರ ವಿಧಾನಸಭೆ ಚುನಾವಣೆಗೆ ದಿ. ಜಯಲಲಿತಾ ನೇತೃತ್ವದ ಎಐಎಡಿಎಂಕೆ ಪಕ್ಷ ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುವ ನಿರೀಕ್ಷೆ ಇದೆ. ಕಳೆದ ವಾರ ಎಐಎಡಿಎಂಕೆ ಪಕ್ಷದ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ. ಪಳನಿಸ್ವಾಮಿ ನವದೆಹಲಿಯಲ್ಲಿ ಕೇಂದ್ರ ಸಚಿವ, ಬಿಜೆಪಿ ಹಿರಿಯ ನಾಯಕ ಅಮಿತ್ ಶಾ ಭೇಟಿಯಾಗಿದ್ದರು. ಈ ಭೇಟಿ ಎಐಎಡಿಎಂಕೆ ಮತ್ತು ಬಿಜೆಪಿ ನಡುವಿನ ಮೈತ್ರಿಯ ಕುರಿತು ಕುತೂಹಲ ಮೂಡಿಸಿದೆ.
ಇನ್ನು 2023ರಲ್ಲಿ ರಾಜಕೀಯ ಅಭಿಪ್ರಾಯಗಳು ಭಿನ್ನವಾದ ಕಾರಣ ತಮಿಳುನಾಡಿನಲ್ಲಿ ಬಿಜೆಪಿ-ಎಐಎಡಿಎಂಕೆ ಮೈತ್ರಿ ಮುರಿದುಬಿದ್ದಿತ್ತು. ವರದಿಯಂತೆ ಇದಕ್ಕೆ ಮುಖ್ಯ ಕಾರಣ ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ. ಈಗ ಪುನಃ ಮೈತ್ರಿ ಮಾಡಿಕೊಳ್ಳಬೇಕಾದರೆ ಎಡಪ್ಪಾಡಿ ಕೆ. ಪಳನಿಸ್ವಾಮಿ ಅಣ್ಣಾಮಲೈ ಅವರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಸಬೇಕು ಎಂದು ಬೇಡಿಕೆ ಇಟ್ಟಿದ್ದಾರೆ ಎಂದು ಪಕ್ಷದ ಮೂಲಗಳು ಹೇಳಿವೆ.
Comments are closed.