Brijesh Chowta : ತಂದೆ- ತಾಯಿ ಜೊತೆ ಮೋದಿ ಭೇಟಿ ಮಾಡಿದ ಸಂಸದ ಬ್ರಿಜೇಶ್ ಚೌಟ!!

Share the Article

Brijesh Chowta: ದೆಹಲಿಯಲ್ಲಿ ಲೋಕಸಭಾ ಅಧಿವೇಶನ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಸಂಸದ ಕ್ಯಾ|ಬ್ರಿಜೇಶ್‌ ಚೌಟ ಅವರು ತಮ್ಮ ತಂದೆ ಸೇಸಣ್ಣ ಚೌಟ ಹಾಗೂ ತಾಯಿ ಪುಷ್ಪಾ ಅವರೊಂದಿಗೆ ಬುಧವಾರ ಹೊಸದಿಲ್ಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಈ ವೇಳೆ ಚೌಟ ಅವರು ತುಳುನಾಡಿನ ಸಂಸ್ಕೃತಿಯ ಸಂಕೇತ ಹಾಗೂ ಪಿಲಿ ನಲಿಕೆಯಲ್ಲಿ ಪ್ರಧಾನವಾದ ಪಿಲಿಮಂಡೆ( ಹುಲಿ ವೇಷದ ಮುಖವಾಡ)ಯನ್ನು ಸ್ಮರಣಿಕೆಯಾಗಿ ಅಲ್ಲದೆ ಕೊಲ್ಲೂರು ಶ್ರೀ ಮೂಕಾಂಬಿಕ ದೇವಸ್ಥಾನದ ಪ್ರಸಾದವನ್ನು ಪ್ರಧಾನಿಯವರಿಗೆ ನೀಡಿದರು.

ನರೇಂದ್ರ ಮೋದಿ ಅವರನ್ನು ನನ್ನ ಹೆತ್ತವರೊಂದಿಗೆ ಭೇಟಿ ಮಾಡುವ ಅವಕಾಶ ಲಭಿಸಿರುವುದು ಬದುಕಿನಲ್ಲಿನ ಬಹಳ ಖುಷಿಯ ಹಾಗೂ ಸಂತೃಪ್ತಿಯ ಭಾವವನ್ನು ಮೂಡಿಸಿದೆ ಎಂದು ಬ್ರಿಜೇಶ್ ಚಟ ಅವರು ಹೇಳಿದ್ದಾರೆ.

Comments are closed.