Karnataka Gvt: ರಾಜ್ಯದಲ್ಲಿ ತಾಪಮಾನ ಹೆಚ್ಚಳ – ಸರ್ಕಾರಿ ಕಚೇರಿಗಳ ಸಮಯವನ್ನೇ ಬದಲಿಸಿಗೆ ಸರ್ಕಾರ!!

Karnataka Gvt: ರಾಜ್ಯದಲ್ಲಿ ಬಿಸಿಲ ಧಗೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ರಾಜ್ಯದ ಕೆಲವು ಪ್ರದೇಶಗಳಲ್ಲಿ ಮಳೆಯಾದರೂ ಕೂಡ ಈ ಬಿಸಿಲ ಝಳಕ್ಕೆ ಜನ ತತ್ತರಿಸಿ ಹೋಗುತ್ತಿದ್ದಾರೆ. ತಾಪಮಾನ ಹೆಚ್ಚಳದಿಂದ ಸರ್ಕಾರ ಇದೀಗ ಸರ್ಕಾರಿ ಕಚೇರಿಗಳ ಸಮಯವನ್ನೇ ಬದಲಿಸಿ ಆದೇಶ ಹೊರಡಿಸಿದೆ.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಬಿಸಿಲಿನ ತಾಪದಿಂದಾಗಿ ನೌಕರರು ಅನುಭವಿಸುತ್ತಿರುವ ತೊಂದರೆಗಳ ಕುರಿತು ವಿವರಿಸಿ ಕಚೇರಿಗಳ ವೇಳಾ ಪಟ್ಟಿ ಬದಲಿಸುವಂತೆ ಫೆ.21ರಂದು ಮನವಿ ಮಾಡಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ನೌಕರರ ಬೇಡಿಕೆಗೆ ಸ್ಪಂದಿಸಿ ವೇಳಾ ಪಟ್ಟಿ ಬದಲಿಸಿದೆ.
2025 ನೇ ಸಾಲಿನ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಹೆಚ್ಚಿನ ಬಿಸಿಲಿನ ತಾಪಮಾನದ ಹಿನ್ನೆಲೆಯಲ್ಲಿ ಬೆಳಗಾವಿ ವಿಭಾಗದ ವಿಜಯಪುರ ಮತ್ತು ಬಾಗಲಕೋಟೆ ಹಾಗೂ ಕಲಬುರಗಿ ವಿಭಾಗದ ಎಲ್ಲ ಜಿಲ್ಲೆಗಳಿಗೆ ಪ್ರಸ್ತುತ ಜಾರಿಯಲ್ಲಿರುವ ಸರ್ಕಾರಿ ಕಚೇರಿಗಳ ವೇಳಾಪಟ್ಟಿಯ ಬದಲಾಗಿ ಏಪ್ರಿಲ್ ಮತ್ತು ಮೇ ತಿಂಗಳುಗಳಲ್ಲಿ ಬೆಳಗ್ಗೆ 8ರಿಂದ ಮಧ್ಯಾಹ್ನ 1.30 ರವರೆಗೆ ಕಚೇರಿ ವೇಳೆ ಬದಲಾಯಿಸಿ ಆದೇಶಿಸಿದೆ.
Comments are closed.