Sanjana Galrani: ಎರಡನೇ ಮಗುವಿನ ನಿರೀಕ್ಷೆಯಲ್ಲಿ ನಟಿ ಸಂಜನಾ ಗಲ್ರಾನಿ!

Sanjana Galrani: ನಟಿ ಸಂಜನಾ ಗಲ್ರಾನಿ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ನಟಿ ಸೋಷಿಯಲ್‌ ಮೀಡಿಯಾದಲ್ಲಿ ಆಕ್ಟೀವ್‌ ಆಗಿದ್ದು, ಮತ್ತೆ ತಾಯಿಯಾಗುತ್ತಿರುವ ಸಿಹಿ ಸುದ್ದಿಯನ್ನು ಹಂಚಿಕೊಂಡಿದ್ದಾರೆ.

ಹಸಿರು ಸೀರೆಯುಟ್ಟು, ಸೀಮಂತದ ಫೋಟೋಗಳನ್ನು, ವಿಡಿಯೋವನ್ನು ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಶೇರ್‌ ಮಾಡಿಕೊಂಡಿದ್ದಾರೆ.

ಈ ಪೋಸ್ಟ್‌ಗೆ ” ಈ ಯುಗಾದಿ ನನಗೆ ತುಂಬಾ ವಿಶೇಷವಾಗಿದೆ. ಏಕೆಂದರೆ ನಮ್ಮ ಕುಟುಂಬದ ಹೊಸ ಸದಸ್ಯರು ಶೀಘ್ರದಲ್ಲೇ ನಮ್ಮೊಂದಿಗೆ ಸೇರಲು ನಾವು ಕಾಯುತ್ತಿದ್ದೇವೆ. ದಯವಿಟ್ಟು ನಿಮ್ಮ ಪ್ರಾರ್ಥನೆ ಮತ್ತು ಆಶೀರ್ವಾದದಲ್ಲಿ ನನ್ನನ್ನು ಇರಿಸಿʼ ಎಂದು ಕ್ಯಾಪ್ಷನ್‌ ಕೊಟ್ಟಿದ್ದಾರೆ.

Comments are closed.