Belthangady: ಎಪ್ರಿಲ್ 6ರ, ಸೌಜನ್ಯ ಹೋರಾಟಕ್ಕೆ ಕೋರ್ಟ್ ಮಧ್ಯಂತರ ತಡೆ

Belthangady: ಸೌಜನ್ಯ ಸಾವಿಗೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಇದೇ 6ರಂದು, ಭಾನುವಾರ ಬೆಳ್ತಂಗಡಿಯಿಂದ ಧರ್ಮಸ್ಥಳಕ್ಕೆ ಹಮ್ಮಿಕೊಂಡಿದ್ದ ಪ್ರತಿಭಟನಾ ರ್ಯಾಲಿಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

‘ಧರ್ಮಸ್ಥಳ ಗ್ರಾಮ ಹಿತರಕ್ಷಣಾ ವೇದಿಕೆ’ಯ ಕಾರ್ಯದರ್ಶಿ ಧನಕೀರ್ತಿ ಅರಿಗ ಅವರು ‘ಸೌಜನ್ಯ ಸಾವಿಗೆ ನ್ಯಾಯ ದೊರಕಿಸುವ ನೆಪದಲ್ಲಿ ಧರ್ಮಸ್ಥಳಕ್ಕೆ ನುಗ್ಗುವ ಮತ್ತು ದಾಂದಲೆ ಎಬ್ಬಿಸುವ ದುರುದ್ದೇಶದಿಂದ ಹಮ್ಮಿಕೊಂಡಿರುವ ಬೆಳ್ತಂಗಡಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳದವರೆಗಿನ ಪ್ರತಿಭಟನಾ ರ‍್ಯಾಲಿಯನ್ನು ತಡೆಯಬೇಕು’ ಎಂದು ಸಲ್ಲಿಸಿರುವ ರಿಟ್‌ ಅರ್ಜಿ ಸಲ್ಲಿಸಿದ್ದರು.

ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿ ಈ ಕುರಿತಂತೆ ಆದೇಶಿಸಿದ ಹೈಕೋರ್ಟ್‌ ಉದ್ದೇಶಿತ ರ‍್ಯಾಲಿಗೆ ಮಧ್ಯಂತರ ತಡೆ ನೀಡಿದೆ.

ವಾದ- ಪ್ರತಿ ವಾದಗಳನ್ನು ಆಲಿಸಿದ ಕೋರ್ಟ್ ಅರ್ಜಿಯ ಜೊತೆಗೆ ಲಗತ್ತಿಸಲಾಗಿರುವ ಕೆಲವು ವಾಟ್ಸ್‌ ಆಪ್‌ ಸಂದೇಶಗಳನ್ನು ಗಮನಿಸಿ ಈ ತೀರ್ಪು ನೀಡಿದೆ. ಪ್ರತಿಭಟನೆಯ ಹೆಸರಿನಲ್ಲಿ ಧರ್ಮಸ್ಥಳಕ್ಕೆ ನುಗ್ಗುವ ಮತ್ತು ಅಲ್ಲಿನ ಶಾಂತಿ ಕದಡುವ ಕಾರಣ ಕೊಟ್ಟು ನ್ಯಾಯಪೀಠ ಆದೇಶ ನೀಡಿದೆ.

Comments are closed.