Mangaluru: ಜೈಲ್ ಜಾಮರ್ ಸಮಸ್ಯೆ; ಜೈಲಿಗೆ ಮುತ್ತಿಗೆ ಹಾಕಿದ ಪ್ರತಿಭಟನಕಾರರು!

Mangaluru: ನಗರದ ಜಿಲ್ಲಾ ಕಾರಾಗೃಹದಲ್ಲಿ ಮೊಬೈಲ್ ಜಾಮರ್ ಅಳವಡಿಕೆ ಮಾಡಿದ್ದರಿಂದ ಕಾರಾಗೃಹದ ಸುತ್ತಮುತ್ತ ಸುಮಾರು ಒಂದು ಕಿ.ಮೀ.ಪ್ರದೇಶದಲ್ಲಿ ನೆಟ್‌ವರ್ಕ್ ಸಮಸ್ಯೆ ತಲೆದೋರಿರುವ ಕಾರಣ ಶಾಸಕ ಡಿ.ವೇದವ್ಯಾಸ್ ಕಾಮತ್ ನೇತೃತ್ವದಲ್ಲಿ ಜಿಲ್ಲಾ ಕಾರಾಗೃಹದ ಮುಂಭಾಗ ನಾಗರಿಕರು ಇಂದು (ಶನಿವಾರ) ಪ್ರತಿಭಟನೆ ಮಾಡಿದರು.
ಈ ವೇಳೆ ಜೈಲಿಗೆ ಮುತ್ತಿಗೆ ಹಾಕುವ ಯತ್ನ ನಡೆದಿದೆ. ಈ ಸಂದರ್ಭದಲ್ಲಿ ನೂಕಾಟ ತಳ್ಳಾಟ ನಡೆದು, ಪಾಲಿಕೆಯ ನಿಕಟಪೂರ್ವ ಸದಸ್ಯೆ ಲೀಲಾಲವತಿ ಪ್ರಕಾಶ್ ಅವರು ಬಿದ್ದು ಗಾಯಗೊಂಡಿದ್ದು, ಅವರನ್ನು ಕೆಎಂಸಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯಲಾಗಿದೆ.
ಜೈಲು ಮುಂಭಾಗ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.
Comments are closed.