Accident: ನಿಂತಿದ್ದ ಲಾರಿಗೆ ಗುದ್ದಿದ ಮಿನಿ ಬಸ್‌; ಐವರ ಸಾವು!

Accident: ನಿಂತಿದ್ದ ಲಾರಿಗೆ ಮಿನಿ ಬಸ್‌ ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ ಜೇವರ್ಗಿ ತಾಲೂಕಿನ ನೆಲೋಗಿ ಕ್ರಾಸ್‌ ಬಳಿ ನಡೆದಿದೆ.

ಈ ಅಪಘಾತದಲ್ಲಿ ವಾಜೀದ್‌, ಮೆಹಬೂಬಿ, ಪ್ರಿಯಾಂಕಾ, ಮೆಹಬೂಬ್‌ ಸೇರಿ ಐವರು ಸಾವಿಗೀಡಾಗಿದ್ದಾರೆ. ಇವರೆಲ್ಲರೂ ಬಾಗಲಕೋಟೆ ಮೂಲದವರು ಎನ್ನಲಾಗಿದೆ.

ಕಲಬುರಗಿಯ ಖಾಜಾ ಬಂದೇನವಾಜ್‌ ದರ್ಗಾಕ್ಕೆ ತೆರಳುವಾಗ ಈ ಅಪಘಾತ ಸಂಭವಿಸಿದ್ದು, ಮಿನಿ ಬಸ್‌ನಲ್ಲಿದ್ದ ಒಟ್ಟು 15 ಜನರ ಪೈಕಿ ಐವರು ಸಾವಿಗೀಡಾಗಿದ್ದಾರೆ. 11 ಜನರಿಗೆ ಗಾಯವಾಗಿದೆ. ಕಲಬುರಗಿಯ ಜಿಮ್ಸ್‌ ಆಸ್ಪತ್ರೆಗೆ ಗಾಯಾಳುಗಳನ್ನು ದಾಖಲು ಮಾಡಲಾಗಿದೆ.

Comments are closed.